Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:14 - ಕನ್ನಡ ಸತ್ಯವೇದವು J.V. (BSI)

14 ನಿನ್ನ ಕೂಲಿ ತಕ್ಕೊಂಡು ಹೋಗು; ನಿನಗೆ ಕೊಟ್ಟಂತೆ ಕಡೆಗೆ ಬಂದ ಇವನಿಗೂ ಕೊಡುವದಕ್ಕೆ ನನಗೆ ಮನಸ್ಸುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ನೀನು ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು. ನಾನು ನಿನಗೆ ಎಷ್ಟು ಕೂಲಿ ಕೊಟ್ಟೆನೋ ಅಷ್ಟೇ ಕೂಲಿಯನ್ನು ಕೊನೆಗೆ ಗೊತ್ತುಮಾಡಲ್ಪಟ್ಟವನಿಗೂ ಕೊಡಲು ಇಷ್ಟಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಕೂಲಿ ತೆಗೆದುಕೊಂಡು ಹೋಗು. ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವುದು ನನ್ನ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅತ್ತಾ ತುಜಿ ಸಾಂಗಲ್ಲಿ ಮಜುರಿ ಘೆ ಅನಿ ಘರಾಕ್ ಜಾ; ಆಕ್ರಿಕ್ ಯೆಲ್ಲ್ಯಾ ಹೆಕಾಬಿ ತುಕಾ ದಿಲ್ಲಿ ತವ್ಡಿಚ್ ಮಜುರಿ ದಿತಲಿ ಮಾಜಿ ಕುಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:14
13 ತಿಳಿವುಗಳ ಹೋಲಿಕೆ  

ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ಅದಕ್ಕೆ ತಂದೆಯು - ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ಮತ್ತು ನನ್ನದೆಲ್ಲಾ ನಿನ್ನದೇ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.


ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದರೆ ನೀನು ಪ್ರಾರ್ಥನೆಮಾಡಬೇಕಾದರೆ ನಿನ್ನ ಏಕಾಂತವಾದ ಕೋಣೆಯೊಳಗೆ ಹೋಗಿ ಬಾಗಲನ್ನು ಮುಚ್ಚಿಕೊಂಡು ಅಂತರಂಗದಲ್ಲಿಯೂ ಇರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಆದದರಿಂದ ನೀನು ಧರ್ಮಕೊಡುವಾಗ ನಿನ್ನ ಮುಂದೆ ಕೊಂಬೂದಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡು ನನ್ನ ಜೊತೆಯಲ್ಲಿ ಬಂದು ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ಕೈ ಹಿಡಿದು ತನ್ನ ರಥದಲ್ಲಿ ಕರಕೊಂಡು ಹೋದನು.


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಅದಕ್ಕೆ ಅವನು ಅವರಲ್ಲಿ ಒಬ್ಬನಿಗೆ - ಏನಪ್ಪಾ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ನೀನು ನನ್ನ ಸಂಗಡ ಒಂದು ಪಾವಲಿಗೆ ಒಡಂಬಟ್ಟಿಯಲ್ಲಾ;


ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು