Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:2 - ಕನ್ನಡ ಸತ್ಯವೇದವು J.V. (BSI)

2 ಆಳಿಗೆ ದಿನಕ್ಕೆ ಒಂದು ಪಾವಲಿಯಂತೆ ಕೂಲಿ ಗೊತ್ತುಮಾಡಿ ಅವರನ್ನು ದ್ರಾಕ್ಷೇತೋಟಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಂದು ದಿನಕ್ಕೆ ಒಬ್ಬ ಕೆಲಸಗಾರನಿಗೆ ಒಂದು ಬೆಳ್ಳಿನಾಣ್ಯವನ್ನು ಕೊಡುವುದಾಗಿ ಹೇಳಿ ಆ ಕೆಲಸಗಾರರನ್ನು ಅವನು ತೋಟಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ದಿನಕ್ಕೆ ಒಂದು ಬೆಳ್ಳಿನಾಣ್ಯ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿಕೊಂಡು ತನ್ನ ದ್ರಾಕ್ಷಿಯ ತೋಟಕ್ಕೆ ಅವರನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆನಿ ತ್ಯಾ ಆಳಾಕ್ನಿ ಎಕ್ ದಿಸಾಕ್ ಎಕ್ ಚಾಂದಿಚೊ ಪೈಸೊ ದಿತಾ ಮನುನ್ ಸಾಂಗುನ್ ಅಪ್ನಾಚ್ಯಾ ಶೆತಾತ್ ಕಾಮಾಕ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:2
24 ತಿಳಿವುಗಳ ಹೋಲಿಕೆ  

ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಅದು - ರೂಪಾಯಿಗೆ ಒಂದು ಸೇರು ಗೋದಿ; ರೂಪಾಯಿಗೆ ಮೂರು ಸೇರು ಜವೆ ಗೋದಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡ ಎಂದು ಹೇಳಿತು.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ಮರುದಿನ ಅವನು ಎರಡು ಹಣಗಳನ್ನು ತೆಗೆದು ಛತ್ರದವನಿಗೆ ಕೊಟ್ಟು - ಇವನನ್ನು ಆರೈಕೆಮಾಡು; ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು ಅಂದನು.


ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೂ ಪವಿತ್ರಾತ್ಮಭರಿತನಾಗಿರುವನು.


ತೆರಿಗೆಗೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ ಅನ್ನಲು ಅವರು ಆತನಿಗೆ ಒಂದು ಹಣವನ್ನು ತಂದುಕೊಟ್ಟರು.


ಅದಕ್ಕೆ ಅವನು ಅವರಲ್ಲಿ ಒಬ್ಬನಿಗೆ - ಏನಪ್ಪಾ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ನೀನು ನನ್ನ ಸಂಗಡ ಒಂದು ಪಾವಲಿಗೆ ಒಡಂಬಟ್ಟಿಯಲ್ಲಾ;


ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.


ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು .


ಅವನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರುಷ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇದ್ದ ಪೂಜಾಸ್ಥಳಗಳನ್ನೂ ಅಶೇರ ಸ್ತಂಭಗಳನ್ನೂ ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಪಡಿಸಿದನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ.


ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು.


ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನಷ್ಟೆ. ಆ ಕಾಲದಲ್ಲಿ ದೇವೋಕ್ತಿಗಳು ವಿರಳವಾಗಿದ್ದವು, ದೇವದರ್ಶನಗಳು ಅಪರೂಪವಾಗಿದ್ದವು.


ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.


ಬಾಲಕನಾದ ಸಮುವೇಲನು ಏಫೋದೆಂಬ ನಾರುಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ಆಗ ತನ್ನ ಶಿಷ್ಯರಿಗೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ;


ಅದು ಹೇಗಂದರೆ - ಪರಲೋಕರಾಜ್ಯವು ಒಬ್ಬ ಮನೆಯ ಯಜಮಾನನಿಗೆ ಹೋಲಿಕೆಯಾಗಿದೆ. ಅವನು ತನ್ನ ದ್ರಾಕ್ಷೇತೋಟಕ್ಕೆ ಕೂಲೀ ಆಳುಗಳನ್ನು ಕರೆಯುವದಕ್ಕೆ ಬೆಳಿಗ್ಗೆ ಹೊರಟನು.


ತರುವಾಯ ಹೆಚ್ಚುಕಡಿಮೆ ಒಂಭತ್ತು ಗಂಟೆಗೆ ಹೋಗಿ ಪೇಟೆಯಲ್ಲಿ ಸುಮ್ಮನೆ ನಿಂತಿದ್ದ ಇನ್ನು ಕೆಲವರನ್ನು ಕಂಡು -


ಕೊಡಬೇಕೋ ಬೇಡವೋ ಎಂದು ಆತನನ್ನು ಕೇಳಿದರು. ಆತನು ಅವರ ಕಪಟವನ್ನು ತಿಳಿದು - ನನ್ನನ್ನು ಯಾಕೆ ಪರೀಕ್ಷೆ ಮಾಡುತ್ತೀರಿ? ನನಗೆ ಒಂದು ಹಣವನ್ನು ತಂದು ತೋರಿಸಿರಿ ಅನ್ನಲು ಅವರು ತಂದರು.


ಅವರಿಗೆ - ನನಗೆ ಒಂದು ಹಣವನ್ನು ತೋರಿಸಿರಿ. ಇದರಲ್ಲಿ ಯಾರ ತಲೆಯೂ ಮುದ್ರೆಯೂ ಅದೆ ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು.


ಆಗ ಸಾಯಂಕಾಲ ಐದು ಗಂಟೆಗೆ ಬಂದವರಿಗೆ ಒಂದೊಂದು ಪಾವಲಿ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು