Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:22 - ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ಯೇಸು - ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾತ್ರೆಯಲ್ಲಿ ನೀವು ಕುಡಿಯುವದು ನಿವ್ಮಿುಂದಾದೀತೇ ಎಂದು ಕೇಳಲು ಅವರು - ಆಗುವದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು. ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಉತ್ತರವಾಗಿ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೇ?” ಎಂದು ಕೇಳಿದರು. ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ತಿಚ್ಯಾ ಲೆಕಾಕ್ನಿ ಜೆಜುನ್,“ ತುಮಿ ಕಾಯ್ ಇಚಾರುಲ್ಯಾಶಿ, ಮನುನ್ ತುಮ್ಕಾ ಗೊತ್ತ್ ಹಾಯ್ ಕಾಯ್? ಮಿಯಾ ಫಿತಲೆ ಹಾಯ್ ತ್ಯಾ ಕಸ್ಟಾಚ್ಯಾ ಆಯ್ದಾನಾತ್ಲೆ ತುಮ್ಚ್ಯಾನ್ ಫಿವ್ಕ್ ಹೊತಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ ಹೊಯ್ ಅಮ್ಕಾ ಫಿವ್ಕ್ ಹೊತಾ.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:22
17 ತಿಳಿವುಗಳ ಹೋಲಿಕೆ  

ಮೊಣಕಾಲೂರಿ - ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತವೇ ಆಗಲಿ ಅಂದನು.


ತಿರಿಗಿ ಎರಡನೆಯ ಸಾರಿ ಹೋಗಿ - ನನ್ನ ತಂದೆಯೇ, ನಾನು ಕುಡಿದ ಹೊರತು ಈ ಪಾತ್ರೆ ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಎಂದು ಪ್ರಾರ್ಥನೆಮಾಡಿದನು.


ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು.


ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ; ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಅಂದನು.


ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.


ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ.


ನಿನ್ನ ಕರ್ತನೂ ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೇಹೋವನು ಹೀಗನ್ನುತ್ತಾನೆ - ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ ನನ್ನ ರೋಷವು ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು; ಅದನ್ನು ನೀನು ಇನ್ನು ಕುಡಿಯೆ;


ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂಬ ದುರಭಿಪ್ರಾಯಪಟ್ಟು ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.


ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು. ಅದು ನೆರವೇರುವ ತನಕ ನಾನು ಎಷ್ಟೋ ಬಿಕ್ಕಟ್ಟಿನಲ್ಲಿದ್ದೇನೆ.


ಯೆಹೋವನು ಇಂತೆನ್ನುತ್ತಾನೆ - ಪಾತ್ರೆಯಲ್ಲಿ ಕುಡಿಯುವದು ಯಾರ ಪಾಲಿಗೆ ಬರಲಿಲ್ಲವೋ ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿಯಲೇ ಕುಡಿಯುವಿ.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ಎಲ್ಲಾ ನಿವಾಸಿಗಳೊಡನೆ ಭೂವಿುಯು ಕರಗಿಹೋದರೂ ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ [ಎಂಬದು]. ಸೆಲಾ.


ಪೇತ್ರನು ಆತನಿಗೆ - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲ ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚತ್ತುಕೋ, ಎಚ್ಚತ್ತುಕೋ, ಎದ್ದು ನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದು ಬಿಟ್ಟಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು