Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:24 - ಕನ್ನಡ ಸತ್ಯವೇದವು J.V. (BSI)

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಅಣ್ಣತಮ್ಮಂದಿರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಶಿಷ್ಯರ ಮೇಲೆ ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬೇರೆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹುರಲ್ಲ್ಯಾ ಧಾ ಶಿಸಾನಿ ಹೆ ಆಯಿಕ್ಲ್ಯಾನಿ. ತನ್ನಾ ತೆಕಾ ಹ್ಯಾ ದೊನ್ ಭಾವಾಂಚ್ಯಾ ವರ್‍ತಿ ರಾಗ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:24
13 ತಿಳಿವುಗಳ ಹೋಲಿಕೆ  

ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;


ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.


ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಆಗ ಆತನು ಅವರಿಗೆ - ನನ್ನ ಪಾತ್ರೆಯಲ್ಲಿ ನೀವು ಕುಡಿಯುವಿರಿ ಸರಿ; ಆದರೆ ನನ್ನ ಎಡಬಲಗಡೆಗಳಲ್ಲಿ ಕೂತುಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.


ಆದರೆ ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ - ಜನಗಳನ್ನಾಳುವವರು ಅವರ ಮೇಲೆ ಅಹಂಕಾರದಿಂದ ದೊರೆತನಮಾಡುತ್ತಾರೆ, ಮತ್ತು ದೊಡ್ಡವರು ಬಲಾತ್ಕಾರದಿಂದ ಅಧಿಕಾರ ನಡಿಸುತ್ತಾರೆ ಎಂದು ನೀವು ಬಲ್ಲಿರಷ್ಟೆ.


ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.


ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ ಸಬ್ಬತ್‍ದಿನದಲ್ಲಿ ಯೇಸು ಸ್ವಸ್ಥಮಾಡಿದನಲ್ಲಾ ಎಂದು ರೋಷಗೊಂಡು ಜನರಿಗೆ - ಕೆಲಸಮಾಡುವದಕ್ಕೆ ಆರು ದಿವಸಗಳು ಅವೆಯಷ್ಟೆ; ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್‍ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು