Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:28 - ಕನ್ನಡ ಸತ್ಯವೇದವು J.V. (BSI)

28 ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಾನ್ಸಾಚೊ ಲೆಕ್ ಲೊಕಾನಿಕ್ನಾ ಸೆವಾ ಕರುನ್ ಘೆವ್ಕ್ ಮನುನ್ ಯೆವ್ಕ್ ನಾ. ತೊ ಸೆವಾ ಕರುಕ್ ಅನಿ ಲೈ ಲೊಕಾಂಚ್ಯಾ ಸಾಟ್ನಿ ಜಿವ್ ದಿವ್ನ್ ತೆಂಕಾ ಸುಟ್ಕಾ ದಿವ್ಚೆ ಮನುನ್ ಯೆಲಾ!” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:28
35 ತಿಳಿವುಗಳ ಹೋಲಿಕೆ  

ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ಯಾವನು ಹೆಚ್ಚಿನವನು; ಊಟಕ್ಕೆ ಕೂತವನೋ ಸೇವೆಮಾಡುವವನೋ? ಊಟಕ್ಕೆ ಕೂತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಬಿಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಹೀಗೆ ಆತನು ಮಗನಾಗಿದ್ದರೂ ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಮತ್ತು ಆತನು ಅವರಿಗೆ - ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ; ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ ಆತನು ಬಹು ಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾಕರ್ತನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.


ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ಕೀಳಲ್ಪಟ್ಟಿದ್ದಾನೆ, ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿವಿುತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಆದರೆ ಯಾವನಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದೆ ಶಾಶ್ವತವಾಗಿ ಬದುಕಿರುವದಕ್ಕಾಗಿ


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ದೇವರು ಒಂದು ವೇಳೆ ಆ ಮನುಷ್ಯನಿಗೆ ಮೆಚ್ಚಿ - ಈಡು ಸಿಕ್ಕಿತು, ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು ಎಂದು ಅಪ್ಪಣೆಕೊಟ್ಟರೆ


ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ನಿಮ್ಮ ಆಳಾಗಿರಬೇಕು.


ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು