Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:30 - ಕನ್ನಡ ಸತ್ಯವೇದವು J.V. (BSI)

30 ಆಗ ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು, ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆಂದು ಕೇಳಿದೊಡನೆಯೇ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಆ ಕುರುಡರು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂಬುದನ್ನು ಅವರು ಕೇಳಿದಾಗ, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಯೇಸು ಹಾದು ಹೋಗುತ್ತಿದ್ದಾರೆಂದು ಕೇಳಿ, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಥೈ ರಸ್ತ್ಯಾಚ್ಯಾ ದಂಡೆಕ್ ಬಸಲ್ಲ್ಯಾ ದೊಗ್ಯಾ ಕುಡ್ಡ್ಯಾನಿ ಜೆಜು ಹಿತ್ನಾ ಪಾರ್ ಹೊವ್ನ್ ಜಾವ್ಕ್ ಲಾಗ್ಲಾ ಮನ್ತಲೆ ಆಯ್ಕುನ್, “ಧನಿಯಾ, ದಾವಿದಾಚ್ಯಾ ಲೆಕಾ ಅಮ್ಚೆ ವರ್‍ತಿ ದಯಾ ದಾಕ್ವು!” ಮನುನ್ ಬೊಬ್ ಮಾರುಕ್ ಚಾಲು ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:30
21 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಯೆರಿಕೋವಿಗೆ ಬಂದರು. ಆತನೂ ಆತನ ಶಿಷ್ಯರೂ ಬಹು ಜನರ ಗುಂಪೂ ಆ ಊರಿನಿಂದ ಹೊರಟು ಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕೂತಿದ್ದನು.


ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು? ಎಂದು ಪ್ರಶ್ನೆಹಾಕಿದ್ದಕ್ಕೆ ಅವರು ಆತನಿಗೆ -


ಆಗ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಅವರನ್ನು ಸ್ವಸ್ಥಮಾಡಿದನು.


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ


ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ ಉಪದ್ರವ ದೆವ್ವ ಇಂಥವುಗಳಿಂದ ಬಿಡಿಸಿ ವಾಸಿಮಾಡಿದನು; ಮತ್ತು ಅನೇಕ ಮಂದಿ ಕುರುಡರಿಗೆ ಕಣ್ಣನ್ನು ದಯಪಾಲಿಸಿದನು.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಆ ಸೀಮೆಯಿಂದ ಕಾನಾನ್ಯರವಳೊಬ್ಬಳು ಹೊರಟು ಬಂದು - ಸ್ವಾಮೀ, ದಾವೀದನ ಕುಮಾರನೇ, ನನ್ನನ್ನು ಕರುಣಿಸು. ನನ್ನ ಮಗಳಿಗೆ ದೆವ್ವದ ಕಾಟ ಬಹಳವಾಗಿದೆ ಎಂದು ಕೂಗಿಕೊಂಡಳು.


ಕುರುಡರಂತೆ ಗೋಡೆಯನ್ನು ತಡವರಿಸುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.


ಕಿವುಡರೇ, ಕೇಳಿರಿ! ಕುರುಡರೇ, ನಿಮ್ಮ ಕಣ್ಣಿಟ್ಟು ನೋಡಿರಿ!


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು, ಮೊಬ್ಬುಕತ್ತಲುಗಳಲ್ಲಿಯೂ ಕುರುಡರ ಕಣ್ಣು ಕಾಣುವದು.


ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.


ಕೇಳಿರಿ! ಬಿತ್ತುವವನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದವು; ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು.


ಆ ಗುಂಪಿನವರು - ಸುಮ್ಮನಿರಿ ಎಂದು ಅವರನ್ನು ಗದರಿಸಲು ಅವರು - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಹೆಚ್ಚಾಗಿ ಕೂಗಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು