Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:4 - ಕನ್ನಡ ಸತ್ಯವೇದವು J.V. (BSI)

4 ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ ಅನ್ನಲು ಅವರು ತೋಟಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ಅವರಿಗೆ, ‘ನೀವು ಹೋಗಿ ನನ್ನ ತೋಟದಲ್ಲಿ ಕೆಲಸ ಮಾಡುವುದಾದರೆ ನಿಮ್ಮ ಕೆಲಸಕ್ಕೆ ಯೋಗ್ಯವಾದ ಕೂಲಿಯನ್ನು ಕೊಡುತ್ತೇನೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಿಗೆ, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುತ್ತೇನೆ,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆಚೆಸಾಟ್ನಿ ತೆನಿ ತೆಂಕಾ, ತುಮಿ ಬಿ ಮಾಜ್ಯಾ ಶೆತಾತ್ ಕಾಮಾಕ್ ಚಲಾ, ತುಮ್ಚಿ ಕಾಯ್ ತಿ ಮಜುರಿ ಮಿಯಾ ತುಮ್ಕಾ ದಿತಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:4
12 ತಿಳಿವುಗಳ ಹೋಲಿಕೆ  

ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಉತ್ತಮವೂ ಮನುಷ್ಯರಿಗೆ ಪ್ರಯೋಜನಕರವೂ ಆಗಿವೆ.


ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಯೇಸು ಅಲ್ಲಿಂದ ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ತರುವಾಯ ಹೆಚ್ಚುಕಡಿಮೆ ಒಂಭತ್ತು ಗಂಟೆಗೆ ಹೋಗಿ ಪೇಟೆಯಲ್ಲಿ ಸುಮ್ಮನೆ ನಿಂತಿದ್ದ ಇನ್ನು ಕೆಲವರನ್ನು ಕಂಡು -


ಅವನು ತಿರಿಗಿ ಹೆಚ್ಚುಕಡಿಮೆ ಹನ್ನೆರಡು ಗಂಟೆಗೆ ಮತ್ತು ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು