Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:6 - ಕನ್ನಡ ಸತ್ಯವೇದವು J.V. (BSI)

6 ತಿರಿಗಿ ಹೆಚ್ಚುಕಡಿಮೆ ಸಾಯಂಕಾಲ ಐದು ಗಂಟೆಗೆ ಹೋಗಿ ಬೇರೆ ಕೆಲವರು ನಿಂತಿರುವದನ್ನು ಕಂಡು ಅವರನ್ನು - ದಿನವೆಲ್ಲಾ ಇಲ್ಲಿ ಯಾಕೆ ಸುಮ್ಮನೆ ನಿಂತಿದ್ದೀರಿ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮತ್ತೊಂದು ಸಾರಿ ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸುಮಾರು ಐದು ಗಂಟೆಗೆ ಆ ಯಜಮಾನನು ಮತ್ತೊಮ್ಮೆ ಪೇಟೆಗೆ ಹೋದನು. ಅಲ್ಲಿ ನಿಂತಿದ್ದ ಕೆಲವರನ್ನು ಅವನು ಕಂಡು, ‘ನೀವು ದಿನವಿಡೀ ಕೆಲಸ ಮಾಡದೆ ಸುಮ್ಮನೆ ಏಕೆ ನಿಂತಿದ್ದೀರಿ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತರುವಾಯ ಸುಮಾರು ಐದು ಗಂಟೆಗೆ ಅವನು ಹೊರಗೆ ಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವುದನ್ನು ಕಂಡು, ‘ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವುದೇಕೆ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಸಾದಾರನ್ ಪಾಚ್ ಘಂಟ್ಯಾಕ್ ತೊ ಅನಿ ಎಗ್ದಾ ಬಾಜಾರಾತ್ ಗೆಲೊ ಅನಿ ಕಾಯ್ಬಿ ಕಾಮ್ ನಸ್ತಾನಾ ಇಬೆ ಹೊತ್ತ್ಯಾ ಅನಿ ಉಲ್ಲ್ಯಾಸ್ಯಾ ಲೊಕಾಕ್ನಿ ತೆನಿ ಬಗಟ್ಲ್ಯಾನ್. ಅನಿ ತೆಂಕಾ, ದಿಸ್ ಬರ್ ಕಾಮ್ ಕರಿನಸ್ತಾನಾ ಕಶ್ಯಾಕ್ ಎಳ್ ಹಾಳ್ ಕರುಕ್ ಲಾಗ್ಲ್ಯಾಶಿ ತುಮಿ? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:6
10 ತಿಳಿವುಗಳ ಹೋಲಿಕೆ  

ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ನನ್ನನ್ನು ಕಳುಹಿಸಿದಾತನ ಕಾರ್ಯಗಳನ್ನು ನಾವು ಹಗಲಿರುವಾಗಲೇ ನಡಿಸಬೇಕು. ರಾತ್ರಿ ಬರುತ್ತದೆ, ಅದು ಬಂದ ಮೇಲೆ ಯಾರೂ ಕೆಲಸ ಮಾಡಲಾರರು.


ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ.


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವದು; ಸೋಮಾರಿಯು ಹಸಿವೆಗೊಳ್ಳುವನು.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಅವನು ತಿರಿಗಿ ಹೆಚ್ಚುಕಡಿಮೆ ಹನ್ನೆರಡು ಗಂಟೆಗೆ ಮತ್ತು ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.


ಅವರು - ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದಾಗ ಅವನು - ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ ಅಂದನು.


ಆಗ ಸಾಯಂಕಾಲ ಐದು ಗಂಟೆಗೆ ಬಂದವರಿಗೆ ಒಂದೊಂದು ಪಾವಲಿ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು