Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:8 - ಕನ್ನಡ ಸತ್ಯವೇದವು J.V. (BSI)

8 ಸಂಜೇಹೊತ್ತಿಗೆ ದ್ರಾಕ್ಷೇತೋಟದ ಯಜಮಾನನು ತನ್ನ ಪಾರುಪತ್ಯಗಾರನಿಗೆ - ಆ ಆಳುಗಳನ್ನು ಕರೆದು ಕಡೆಗೆ ಬಂದವರನ್ನು ಮೊದಲು ಮಾಡಿಕೊಂಡು ಮೊದಲು ಬಂದವರ ತನಕ ಅವರಿಗೆ ಕೂಲಿಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಅಂದು ಸಾಯಂಕಾಲ, ತೋಟದ ಯಜಮಾನನು ಕೆಲಸಗಾರರನ್ನು ನೋಡಿಕೊಳ್ಳುವವನಿಗೆ, ‘ಕೂಲಿಯಾಳುಗಳನ್ನು ಕರೆದು ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಸಂಜೆಯಾದಾಗ, ದ್ರಾಕ್ಷಿಯ ತೋಟದ ಯಜಮಾನನು ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನವರೆಗೆ ಕೂಲಿಯನ್ನು ಕೊಡು,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಸಾಂಚೆಕ್ಡೆ ತ್ಯಾ ಮಳ್ಯಾಚ್ಯಾ ಮಾಲ್ಕಾನ್ ಅಪ್ನಾಚ್ಯಾ ಮಕಾದಮಾಕ್ ಬಲ್ವುಲ್ಯಾನ್. ಅನಿ, ಅದ್ದಿ ಬಲ್ವಲ್ಲ್ಯಾಕ್ನಾ ಧರುನ್ ಆಕ್ರಿಕ್ ಬಲ್ವಲ್ಲ್ಯಾ ಪತರ್ ಸಗ್ಳ್ಯಾಕ್ನಿ ತೆಂಚಿ-ತೆಂಚಿ ದಿಸಾಚಿ ಮಜುರಿ ವಾಟುನ್ ದಿ. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:8
22 ತಿಳಿವುಗಳ ಹೋಲಿಕೆ  

ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತು ಮುಣುಗುವದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.


ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ


ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಸ್ವಾವಿು ಹೇಳಿದ್ದೇನಂದರೆ - ಹೊತ್ತುಹೊತ್ತಿಗೆ ಅಶನಕ್ಕೆ ಬೇಕಾದದ್ದನ್ನು ಅಳೆದು ಕೊಡುವದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇವಿುಸಿದ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೆವಾರ್ತೆಯವನು ಯಾರು?


ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ.


ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಆಸ್ತಿಯಿಂದ ಆತನಿಗೆ ಕೊಟ್ಟು ಉಪಚಾರಮಾಡುತ್ತಿದ್ದರು.


ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;


ಬಹುಕಾಲದ ಮೇಲೆ ಆ ಆಳುಗಳ ಧಣಿಯು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು


ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.


ಮನೇಬಾಗಲಲ್ಲಿದ್ದ ಮನೆವಾರ್ತೆಯವನ ಬಳಿಗೆ ಹೋಗಿ ಅವನಿಗೆ -


ಅದಕ್ಕೆ ಅಬ್ರಾಮನು - ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು.


ಅವರು - ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದಾಗ ಅವನು - ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ ಅಂದನು.


ಆಗ ಸಾಯಂಕಾಲ ಐದು ಗಂಟೆಗೆ ಬಂದವರಿಗೆ ಒಂದೊಂದು ಪಾವಲಿ ಸಿಕ್ಕಿತು.


ಅವನು - ನೊವೊವಿುಯ ಸಂಗಡ ಬಂದ ಮೋವಾಬ್‍ಸ್ತ್ರೀಯು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು