Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:12 - ಕನ್ನಡ ಸತ್ಯವೇದವು J.V. (BSI)

12 ಬಳಿಕ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋದರು. ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು. ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜು ದೆವಾಚ್ಯಾ ಗುಡಿಚ್ಯಾ ದಾರಾತ್ ಗೆಲೊ ಅನಿ ಇಕ್ತಲೆ, ಇಕಾತ್ ಘೆತಲೆ ಕರ್‍ತಲ್ಯಾಕ್ನಿ ಭಾಯ್ರ್ ಘಾಟ್ಲ್ಯಾನ್. ಪೈಸ್ಯಾಂಚೊ ಯಾವಾರ್ ಕರ್‍ತಲ್ಯಾಂಚಿ ಮೆಜಾ ತೆನಿ ಪಾಡ್ವುನ್ ಘಾಟ್ಲ್ಯಾನ್ ಅನಿ ಪಾರಿವಾಳಾ ಇಕ್ತಲ್ಯಾಂಚ್ಯಾ ಕುರ್‍ಚಿಯಾಬಿ ಪಾಡ್ವುನ್ ಘಾಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:12
18 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಇರಬೇಕು.


ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.


ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿಕೊಡಬೇಕಾಗಿತ್ತು.


ಕುರಿಯನ್ನು ಕೊಡುವದಕ್ಕೆ ಗತಿಯಿಲ್ಲದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನೂ ದೋಷಪರಿಹಾರಕ್ಕಾಗಿ ಒಂದನ್ನೂ ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು.


ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಮತ್ತೊಂದನ್ನೂ ಸಮರ್ಪಿಸಬೇಕು.


ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿಯೊಬ್ಬನು ಯೆಹೋವನಿಗೆ ಅರ್ಧ ರೂಪಾಯಿಯ ಮೇರೆಗೆ ಕಪ್ಪ ಕೊಡಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧರ್ಧ ರೂಪಾಯಿ ಕಪ್ಪವಾಗಿ ಕೊಡಬೇಕು.


ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯಕ್ಕೆ ಹೋಗಿ ಸುತ್ತಲೂ ಎಲ್ಲಾ ನೋಡಿಕೊಂಡು ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರಕೊಂಡು ಬೇಥಾನ್ಯಕ್ಕೆ ಹೊರಟುಹೋದನು.


ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ


ಗಂಡುಮಗುವನ್ನು ಹೆತ್ತರೂ ಹೆಣ್ಣು ಮಗುವನ್ನು ಹೆತ್ತರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರುಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.


ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತರಬೇಕು.


ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.


ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತರ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು