ಮತ್ತಾಯ 21:15 - ಕನ್ನಡ ಸತ್ಯವೇದವು J.V. (BSI)15 ಆದರೆ ಮಹಾಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನೂ ದಾವೀದನ ಕುಮಾರನಿಗೆ ಜಯ ಜಯವೆಂದು ದೇವಾಲಯದಲ್ಲಿ ಕೂಗುತ್ತಿರುವ ಹುಡುಗರನ್ನೂ ನೋಡಿ ಸಿಟ್ಟುಗೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರು ಮಾಡಿದ ಅತಿಶಯ ಕಾರ್ಯಗಳನ್ನು ಮುಖ್ಯಯಾಜಕರು ಹಾಗೂ ಧರ್ಮಶಾಸ್ತ್ರಿಗಳು ನೋಡಿದರು. ದೇವಾಲಯದಲ್ಲಿ ಮಕ್ಕಳು, ‘ದಾವೀದಕುಲಪುತ್ರನಿಗೆ ಜಯವಾಗಲಿ’ ಎಂದು ಘೋಷಿಸುವುದನ್ನು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಹಿ ಸಗ್ಳಿ ವಿಚಿತ್ರ್ ಕಾಮಾ ಕರ್‍ತಲೆ ಬಗುನ್, ಅನಿ ದೆವಾಚ್ಯಾ ಗುಡಿತ್ ಪೊರಾ, “ದಾವಿದಾಚ್ಯಾ ಲೆಕಾಕ್ ಹೊಗ್ಳಾಪ್!” ಮನುನ್ ಬೊಬ್ ಮಾರ್‍ತಲೆ ಆಯ್ಕುನ್ ಮುಖ್ಯ ಯಾಜಕಾಕ್ನಿ ಅನಿ ಖಾಯ್ದೆ ಶಿಕ್ವುತಲ್ಯಾಕ್ನಿ ಲೈ ರಾಗ್ ಯೆಲೊ. ಅಧ್ಯಾಯವನ್ನು ನೋಡಿ |