Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:19 - ಕನ್ನಡ ಸತ್ಯವೇದವು J.V. (BSI)

19 ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣದೆ ಅದಕ್ಕೆ - ಇನ್ನು ಮೇಲೆ ನಿನ್ನಲ್ಲಿ ಫಲವು ಎಂದೆಂದಿಗೂ ಆಗದೆಹೋಗಲಿ ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ರಸ್ತ್ಯಾಚ್ಯಾ ಬಾಜುಕ್ ಹೊತ್ತೆ ಅಂಜುರಾಚೆ ಝಾಡ್ ತೆನಿ ಬಗಟ್ಲ್ಯಾನ್. ಅನಿ ತೊ ತ್ಯಾ ಝಾಡಾಕ್ಡೆ ಹನ್ನಾ ಖಾವ್ಕ್ ಗೆಲೊ. ಖರೆ ತ್ಯಾ ಝಾಡಾಕ್ ಪಾನಾ ಸೊಡುನ್ ಎಕ್ ಸೈತ್ ಹನ್ನ್ ತೆಕಾ ಗಾವುಕ್ನಾ. ತೆಚೆಸಾಟ್ನಿ ತೆನಿ ತ್ಯಾ ಝಾಡಾಕ್,“ಅನಿ ಫಿಡೆ ತುಕಾ ಕನ್ನಾಬಿ ಫಳಾ ಹೊಯ್‍ನಸ್ತಾನಾ ರ್‍ಹಾಂವ್ದಿತ್.” ಮಟ್ಲ್ಯಾನ್. ತನ್ನಾ ತೆ ಅಂಜುರಾಚೆ ಝಾಡ್ ವಾಳುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:19
17 ತಿಳಿವುಗಳ ಹೋಲಿಕೆ  

ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ.


ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು ಎಂದು ಹೇಳಿದನು.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.


ಆಗ ಯೇಸು ಆ ಮರಕ್ಕೆ - ಇನ್ನು ಮೇಲೆ ಒಬ್ಬರೂ ನಿನ್ನಲ್ಲಿ ಹಣ್ಣನ್ನು ಎಂದೆಂದಿಗೂ ತಿನ್ನದ ಹಾಗಾಗಲಿ ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿದರು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ,


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು; ಇಂಥವರ ಸಹವಾಸವನ್ನೂ ಮಾಡದಿರು.


ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.


ನಾನು ಇವರನ್ನು ನಿರ್ಮೂಲಮಾಡಿ ಕೊಚ್ಚಿಬಿಡುವೆನು; ದ್ರಾಕ್ಷೆಯ ಬಳ್ಳಿಯಲ್ಲಿಯೂ ಅಂಜೂರದ ಮರದಲ್ಲಿಯೂ ಹಣ್ಣಿರುವದಿಲ್ಲ, ಎಲೆಯು ಬಾಡುವದು; ನಾನು ಹಾಳು ಮಾಡುವವರನ್ನು ಅವರಿಗೆ ನೇವಿುಸುವೆನು. ಇದು ಯೆಹೋವನ ನುಡಿ.


ಶಿಷ್ಯರು ಅದನ್ನು ನೋಡಿ ಬೆರಗಾಗಿ - ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿ ಹೋಯಿತಲ್ಲಾ; ಅದು ಹೇಗೆ? ಅಂದರು.


ಬೆಳಿಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬುಡದಿಂದಲೂ ಒಣಗಿ ಹೋಗಿರುವದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು