Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:21 - ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ಯೇಸು - ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ನಾನು ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ. ಇದು ಮಾತ್ರವಲ್ಲದೆ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೆ ಅದೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ: ನೀವು ಸಂಶಯಪಡದೆ ವಿಶ್ವಾಸಿಸಿದರೆ ಈ ಅಂಜೂರದ ಮರಕ್ಕೆ ನಾನು ಏನು ಮಾಡಿದೆನೋ ನೀವೂ ಅಂತೆಯೇ ಮಾಡುವಿರಿ; ಅದು ಮಾತ್ರವಲ್ಲ, ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ನೀವು ಹೇಳಿದರೆ, ಅದು ಹಾಗೆಯೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜುನ್ ತೆಂಕಾ,“ ಮಿಯಾ ತುಮ್ಕಾ ಖರೆಚ್ ಸಾಂಗ್ತಾ. ಮನಾತ್ ಸಂಶೆವ್ ಕರಿನಸ್ತಾನಾ ತುಮಿ ವಿಶ್ವಾಸ್ ಕರ್ಲ್ಯಾರ್, ಮಿಯಾ ಹ್ಯಾ ಅಂಜುರಾಚ್ಯಾ ಝಾಡಾಕ್ ಕರ್ಲ್ಯಾ ಸರ್ಕೆ ತುಮಿಬಿ ಕರುಕ್ ಹೊತಾ. ಅನಿ ಎವ್ಡೆಚ್ ನ್ಹಯ್ ತುಮಿ ಎಕ್ ಮಡ್ಡಿಕ್ ಉಟ್ ಅನಿ ಸಮುಂದರಾತ್ ಜಾವ್ನ್ ಪಡ್. ಮನುನ್ ಸಾಂಗ್ಲ್ಯಾರ್ ತುಮಿ ಸಾಂಗಲ್ಲ್ಯಾ ಸರ್ಕೆಚ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:21
9 ತಿಳಿವುಗಳ ಹೋಲಿಕೆ  

ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಟ್ಟು ಕೇಳಿಕೊಳ್ಳಬೇಕು. ಸಂದೇಹಪಡುವವನೋ ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆಯಂತೆ ಅಲೆಯುತ್ತಿರುವನು.


ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.


ಶಿಷ್ಯರು ಅದನ್ನು ನೋಡಿ ಬೆರಗಾಗಿ - ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿ ಹೋಯಿತಲ್ಲಾ; ಅದು ಹೇಗೆ? ಅಂದರು.


ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು