Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:23 - ಕನ್ನಡ ಸತ್ಯವೇದವು J.V. (BSI)

23 ತರುವಾಯ ಆತನು ದೇವಾಲಯಕ್ಕೆ ಬಂದು ಬೋಧಿಸುತ್ತಿರಲಾಗಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಆತನ ಬಳಿಗೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜು ದೆವಾಚ್ಯಾ ಗುಡಿಕ್ ಯೆಲೊ ಅನಿ ಲೊಕಾಕ್ನಿ ಶಿಕ್ವುಕಲಾಲೊ. ತನ್ನಾ ಮುಖ್ಯ ಯಾಜಕಾ ಅನಿ ಜಾನ್ತಿ ಲೊಕಾ ಜೆಜುಕ್ಡೆ ಯೆಲಿ. ಅನಿ ಜೆಜುಕ್,“ಹೆ ಸಗ್ಳೆ ಕರುಕ್ ತುಕಾ ಕಾಯ್ ಹಕ್ಕ್ ಹಾಯ್? ಹ್ಯೊ ಹಕ್ಕ್ ತುಕಾ ಕೊನ್ ದಿಲಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:23
12 ತಿಳಿವುಗಳ ಹೋಲಿಕೆ  

ಇವರು ಪೇತ್ರ ಯೋಹಾನರನ್ನು ನಡುವೆ ನಿಲ್ಲಿಸಿ - ನೀವು ಎಂಥಾ ಶಕ್ತಿಯಿಂದ ಇಲ್ಲವೆ ಎಂಥಾ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಲು


ಮತ್ತು ಆತನು ದಿನಾಲು ದೇವಾಲಯದಲ್ಲಿ ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮಹಾಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ಮುಖ್ಯಸ್ಥರೂ ಆತನನ್ನು ಕೊಲ್ಲುವದಕ್ಕೆ ಸಂದರ್ಭನೋಡುತ್ತಿದ್ದರು.


ಅದೇ ಗಳಿಗೆಯಲ್ಲಿ ಯೇಸು ಗುಂಪುಗುಂಪಾಗಿ ಕೂಡಿದ್ದ ಜನರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ನಾನು ದಿನಾಲು ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;


ಆ ಮನುಷ್ಯನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಈ ಮಾತನ್ನು ಕೇಳಿ ಮೋಶೆ - ಆ ಕಾರ್ಯವು ಬೈಲಿಗೆ ಬಂತಲ್ಲಾ ಅಂದುಕೊಂಡು ಅಂಜಿದನು.


ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?


ಯೇಸು ಅವರಿಗೆ ಹೇಳಿದ್ದೇನಂದರೆ - ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನೂ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬದನ್ನು ನಿಮಗೆ ಹೇಳುತ್ತೇನೆ.


ಆಮೇಲೆ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ಆತನಿಗೆ ದೇವಾಲಯದ ಕಟ್ಟಣಗಳನ್ನು ತೋರಿಸುವದಕ್ಕೆ ಹತ್ತರಕ್ಕೆ ಬಂದರು.


ಆ ದಿವಸಗಳೊಳಗೆ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಕೊಂಡು


ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ ಅನ್ನಲು ಅವರು ತೋಟಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು