Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:28 - ಕನ್ನಡ ಸತ್ಯವೇದವು J.V. (BSI)

28 ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು - ಮಗನೇ, ಹೋಗಿ ಈ ಹೊತ್ತು ದ್ರಾಕ್ಷೇತೋಟದಲ್ಲಿ ಕೆಲಸಮಾಡು ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಆ ಮನುಷ್ಯನು ಮೊದಲನೆಯ ಮಗನ ಬಳಿಗೆ ಹೋಗಿ, ‘ಮಗನೇ ಈ ದಿನ ನೀನು ಹೋಗಿ, ನನ್ನ ದ್ರಾಕ್ಷಿತೋಟದಲ್ಲಿ ಕೆಲಸ ಮಾಡು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅತ್ತಾ ತುಮಿ ಕಾಯ್ ಮನ್ತ್ಯಾಶಿ? ಎಗ್ದಾ ಎಕ್ ಮಾನುಸ್ ಹೊತ್ತೊ, ತೆಕಾ ದೊನ್ ಲೆಕಾ ಹೊತ್ತಿ. ತೊ ಮೊಟ್ಯಾ ಲೆಕಾಕ್ಡೆ ಜಾತಾ ಅನಿ,“ಲೆಕಾ ಆಜ್ ತಿಯಾ ದರಾಕ್ಷಿಚ್ಯಾ ಮಳ್ಯಾತ್ ಜಾ ಅನಿ ಕಾಮ್ ಕರ್”. ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:28
13 ತಿಳಿವುಗಳ ಹೋಲಿಕೆ  

ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವದನ್ನು ನೀವೇ ಯೋಚಿಸಿರಿ.


ಅದು ಹೇಗಂದರೆ - ಪರಲೋಕರಾಜ್ಯವು ಒಬ್ಬ ಮನೆಯ ಯಜಮಾನನಿಗೆ ಹೋಲಿಕೆಯಾಗಿದೆ. ಅವನು ತನ್ನ ದ್ರಾಕ್ಷೇತೋಟಕ್ಕೆ ಕೂಲೀ ಆಳುಗಳನ್ನು ಕರೆಯುವದಕ್ಕೆ ಬೆಳಿಗ್ಗೆ ಹೊರಟನು.


ಒಬ್ಬ ಮನುಷ್ಯಸು ತನ್ನ ಮನೆಯನ್ನು ಬಿಟ್ಟು ಬೇರೊಂದು ದೇಶಕ್ಕೆ ಹೋಗುವಾಗ ತನ್ನ ಆಳುಗಳಿಗೆ ಮನೇ ಆಡಳಿತವನ್ನು ಒಪ್ಪಿಸಿಕೊಟ್ಟು ಒಬ್ಬೊಬ್ಬನಿಗೆ ಅವನವನ ಕೆಲಸವನ್ನು ನೇವಿುಸಿ ಬಾಗಿಲುಕಾಯುವವನನ್ನು ಕರೆದು - ನೀನು ಎಚ್ಚರವಾಗಿರಬೇಕೆಂದು ಅಪ್ಪಣೆ ಕೊಡುವ ಪ್ರಕಾರ [ನಾನು ನಿಮಗೆ ಅಪ್ಪಣೆ ಕೊಡುತ್ತೇನೆ].


ಇಲ್ಲವೆ ಸಿಲೊವಾವಿುನಲ್ಲಿ ಬುರುಜುಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಅಪರಾಧಿಗಳೆಂದು ಭಾವಿಸುತ್ತೀರೋ?


ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಪೇತ್ರನು ಮನೆಯೊಳಕ್ಕೆ ಬಂದಾಗ ಯೇಸು ಅವನಿಗಿಂತ ಮೊದಲೇ - ಸೀಮೋನಾ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಸುಂಕವನ್ನಾಗಲಿ ಮಂಡೇತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ? ಬೇರೆಯವರಿಂದಲೋ ಎಂದು ಕೇಳಿದನು.


ಹೀಗಿರಲಾಗಿ ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.


ಅದಕ್ಕೆ ಅವನು - ನಾನು ಬರುವದಿಲ್ಲ; ನನ್ನ ಸ್ವದೇಶಕ್ಕೆ, ಸ್ವಜನರ ಬಳಿಗೆ ಹೋಗುತ್ತೇನೆ ಅಂದನು.


ಕಡೆಗೆ ಅವರು - ನಾವರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ - ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ.


ಅವನು - ನಾನು ಹೋಗುವದಿಲ್ಲವೆಂದು ಹೇಳಿದಾಗ್ಯೂ ತರುವಾಯ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು