Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:30 - ಕನ್ನಡ ಸತ್ಯವೇದವು J.V. (BSI)

30 ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು - ಹೋಗುತ್ತೇನಪ್ಪಾ ಅಂದಾಗ್ಯೂ ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ತಂದೆ ಎರಡನೆಯ ಮಗನ ಹತ್ತಿರ ಹೋಗಿ ಅಂತೆಯೇ ತೋಟಕ್ಕೆ ಹೋಗಲು ಹೇಳಿದ. ಅವನು, ‘ಇಗೋ, ಹೋಗುತ್ತೇನಪ್ಪಾ’, ಎಂದು ಹೇಳಿದ. ಆದರೆ ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ತಂದೆಯು ಇನ್ನೊಬ್ಬ ಮಗನ ಬಳಿಗೆ ಹೋಗಿ, ‘ಮಗನೇ, ಈ ದಿನ ನೀನು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸ ಮಾಡು’ ಎಂದನು. ಮಗನು, ‘ಆಗಲಿಯಪ್ಪಾ, ನಾನು ಹೋಗಿ ಕೆಲಸ ಮಾಡುತ್ತೇನೆ’ ಎಂದನು. ಆದರೆ ಆ ಮಗನು ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಆಮೇಲೆ ತಂದೆ ಎರಡನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಉತ್ತರವಾಗಿ, ‘ಅಪ್ಪಾ, ನಾನು ಹೋಗುತ್ತೇನೆ,’ ಎಂದು ಹೇಳಿದರೂ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಮಾನಾ ಬಾಬಾ ಅನಿ ಎಕ್ಲ್ಯಾ ಲೆಕಾಕ್ಡೆ ಜಾತಾ. ಅನಿ ತಸೆಚ್ ಸಾಂಗ್ತಾ. ತನ್ನಾ ತೊ ಲೆಕ್ ಹು ಬಾಬಾ ಮಿಯಾ ಜಾತಾ ಮನ್ತಾ. ಖರೆ ತೊ ಜಾಯ್ಚ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:30
6 ತಿಳಿವುಗಳ ಹೋಲಿಕೆ  

ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಆದದರಿಂದ ಅವರು ನಿಮಗೆ ಏನೇನು ಹೇಳುತ್ತಾರೋ ಅದನ್ನೆಲ್ಲಾ ಮಾಡಿರಿ, ಕಾಪಾಡಿಕೊಳ್ಳಿರಿ; ಆದರೆ ಅವರ ನಡತೆಯ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೇ ಹೊರತು ನಡೆಯುವದಿಲ್ಲ.


ಅವನು - ನಾನು ಹೋಗುವದಿಲ್ಲವೆಂದು ಹೇಳಿದಾಗ್ಯೂ ತರುವಾಯ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು