Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:43 - ಕನ್ನಡ ಸತ್ಯವೇದವು J.V. (BSI)

43 ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ದೇವರ ರಾಜ್ಯವು ನಿಮ್ಮಿಂದ ತೆಗೆದುಹಾಕಲ್ಪಟ್ಟು ಆ ರಾಜ್ಯದಲ್ಲಿ ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಮಾಡುವವರಿಗೆ ಕೊಡಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 “ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ದೆವಾಚೊ ರಾಜ್ ತುಮ್ಚ್ಯಾಕ್ನಾ ಕಾಡುನ್ ಘೆವ್ನ್ ದೆವಾಕ್ ಪಾಜೆ ತಸೆ ಚಲ್ತಲ್ಯಾ ಲೊಕಾಕ್ನಿ ದಿವ್ನ್ ಹೊತಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:43
13 ತಿಳಿವುಗಳ ಹೋಲಿಕೆ  

ಅವರು ಆತನಿಗೆ - ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ಕಾಲಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ಒಕ್ಕಲಿಗರಿಗೆ ತನ್ನ ತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು ಅಂದನು.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಕೊಳ್ಳುವ ಜನಾಂಗವು ಪ್ರವೇಶಿಸಲಿ!


ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು.


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತರಕ್ಕೆ ಬಂತಲ್ಲಾ.


ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?


ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅವನನ್ನು ಪುಡಿಪುಡಿಮಾಡುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು