Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:11 - ಕನ್ನಡ ಸತ್ಯವೇದವು J.V. (BSI)

11 ಹೀಗೆ ಮನೆತುಂಬ ಊಟಕ್ಕೆ ಕೂತರು. ಆಮೇಲೆ ಅರಸನು ಕೂತವರನ್ನು ನೋಡುವದಕ್ಕೆ ಒಳಕ್ಕೆ ಬರಲಾಗಿ ಮದುವೇಬಟ್ಟೆಯನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಆಮೇಲೆ ರಾಜನು ಅತಿಥಿಗಳನ್ನು ನೋಡಲುಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆಗ ರಾಜನು ಜನರನ್ನೆಲ್ಲ ನೋಡಲು ಒಳಗೆ ಬಂದನು. ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲದ ಒಬ್ಬ ಮನುಷ್ಯನನ್ನು ರಾಜನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಅನಂತರ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದಾಗ, ಅಲ್ಲಿ ಮದುವೆಯ ವಸ್ತ್ರವಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ರಾಜಾ ಲಗ್ನಾಕ್ ಯೆಲ್ಲ್ಯಾ ಸೊಯ್ರ್ಯಾಕ್ನಿ ಬಗುಕ್ ಯೆಲೊ ತನ್ನಾ ಲಗ್ನಾಕ್ ಮನುನ್ ನೆಸ್ತಲೆ ಕಪ್ಡೆ ನೆಸುನಸಲ್ಲೊ ಎಕ್ ಮಾನುಸ್ ತೆಕಾ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:11
25 ತಿಳಿವುಗಳ ಹೋಲಿಕೆ  

ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿಸೋಣವಾಗಿತ್ತು. ಆ ನಾರುಮಡಿ ಅಂದರೆ ದೇವಜನರ ಸತ್ಕಾರ್ಯಗಳೇ.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ಅಂದರೆ ಆ ದಿನದಲ್ಲಿ ನಾವು ಇನ್ನೂ ದೇಹದಲ್ಲಿಯೇ ಇದ್ದರೆ ಆ ನಿವಾಸವನ್ನು ದೇಹದ ಮೇಲೆಯೇ ಧರಿಸಿಕೊಳ್ಳುವೆವು.


ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿಕೊಂಡಿರಿ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು; ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು.


ಯೇಹುವು ವಸ್ತ್ರಾಗಾರದ ಅಧಿಪತಿಗೆ - ಬಾಳನ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು ಎಂದು ಆಜ್ಞಾಪಿಸಲು ಅವನು ತಂದುಕೊಟ್ಟನು.


ಆ ಆಳುಗಳು ಹಾದಿಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರು ಅನ್ನದೆ ಕಂಡವರನ್ನೆಲ್ಲಾ ಕೂಡಿಸಿ ಕರಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು