Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:18 - ಕನ್ನಡ ಸತ್ಯವೇದವು J.V. (BSI)

18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ - ಕಪಟಿಗಳೇ, ನನ್ನನ್ನು ಯಾಕೆ ಪರೀಕ್ಷೆಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಜನರ ಕುತಂತ್ರವು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “ನೀವು ಕಪಟಿಗಳು! ನನ್ನನ್ನು ತಪ್ಪಿನಲ್ಲಿ ಸಿಕ್ಕಿಸಲು ಏಕೆ ಪ್ರಯತ್ನಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಂಚಿ ಬುರ್ಶಿ ಯವ್ಜನ್ ಕಾಯ್ ಮನುನ್ ಜೆಜುಕ್ ಗೊತ್ತ್ ಹೊತ್ತೆ. ತಸೆಮನುನ್ ತೆನಿ,“ತುಮಿ ಕುಸ್ಡ್ಯಾನು! ಮಾಕಾ ಗೊಂದ್ಳುನ್ ಘಾಲುಚೆ ಮನುನ್ ತುಮಿ ಕಶ್ಯಾಕ್ ಯೌಜುಲ್ಯಾಸಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:18
15 ತಿಳಿವುಗಳ ಹೋಲಿಕೆ  

ಆತನ ಮೇಲೆ ತಪ್ಪುಹೊರಿಸುವದಕ್ಕೆ ಏನಾದರೂ ಒಂದು ನಿವಿುತ್ತ ಬೇಕಾಗಿದ್ದದರಿಂದ ಈತನು ಏನನ್ನುತ್ತಾನೋ ನೋಡೋಣ ಎಂದು ಹಾಗೆ ಕೇಳಿದರು. ಆದರೆ ಯೇಸು ಬೊಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.


ಆತನು ಪ್ರತಿಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾವನೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಆದರೆ ಅವರು ಹಾಗಂದುಕೊಳ್ಳುವದನ್ನು ಯೇಸು ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವದೇನು? ಯಾವದು ಸುಲಭ?


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಆಗ ಪೇತ್ರನು ಆಕೆಗೆ - ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವದಕ್ಕೆ ಯಾಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಹೂಣಿಟ್ಟವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು ಎಂದು ಹೇಳಿದನು.


ಆತನು ಅವರ ಕುಯುಕ್ತಿಯನ್ನು ಕಂಡುಕೊಂಡು


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವದಕ್ಕಾಗಿ - ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಕೇಳಲು


ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದು ಒಂದು ಚಿಕ್ಕ ಮಗುವನ್ನು ಹಿಡಿದುಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ ಅವರಿಗೆ -


ಆಮೇಲೆ ಇನ್ನೊಬ್ಬನನ್ನು ಕಳುಹಿಸಲು ಅವನನ್ನು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದುಹಾಕಿದರು.


ಹೀಗೆ ಅಂದುಕೊಳ್ಳುವದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಅಂದುಕೊಳ್ಳುತ್ತೀರಿ? ಯಾವದು ಸುಲಭ?


ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಯಾವದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದ್ದಕ್ಕೆ


ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟುಹೋದನು.


ಹೀಗಿರಲಾಗಿ ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.


ತೆರಿಗೆಗೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ ಅನ್ನಲು ಅವರು ಆತನಿಗೆ ಒಂದು ಹಣವನ್ನು ತಂದುಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು