Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:32 - ಕನ್ನಡ ಸತ್ಯವೇದವು J.V. (BSI)

32 ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ನಿಮಗೆ ನುಡಿದದ್ದನ್ನು ನೀವು ಓದಲಿಲ್ಲವೇ. ಆತನು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಮಿಯಾ ಅಬ್ರಾಹಾಮಾಚೊ ದೆವ್, ಇಸಾಕಾಚೊ ದೆವ್, ಅನಿ ಜಾಕೊಬಾಚೊ ದೆವ್. ಅಶೆ ಮಟ್ಲ್ಯಾರ್ ಝಿತ್ತ್ಯಾಂಚೊ ದೆವ್ ತೊ ಮರಲ್ಲ್ಯಾಂಚೊ ನ್ಹಯ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:32
9 ತಿಳಿವುಗಳ ಹೋಲಿಕೆ  

ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮ ಇಸಾಕ ಯಾಕೋಬರ ದೇವರು ಎಂದು ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರವಾಗಿ ನೋಡುವದಕ್ಕೆ ಧೈರ್ಯವಿಲ್ಲದವನಾದನು.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು.


ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ -


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು