Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:46 - ಕನ್ನಡ ಸತ್ಯವೇದವು J.V. (BSI)

46 ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಇನ್ನೇನಾದರೂ ಕೇಳುವದಕ್ಕೆ ಯಾರಿಗೂ ಧೈರ್ಯ ಹುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೇಸುವಿನ ಪ್ರಶ್ನೆಗೆ ಉತ್ತರಕೊಡಲು ಫರಿಸಾಯರಲ್ಲಿ ಯಾರಿಗೂ ಸಾಧ್ಯವಾಗಲಿಲ್ಲ. ಅಂದಿನಿಂದ ಯೇಸುವನ್ನು ವಂಚಿಸುವುದಕ್ಕಾಗಿ ಪ್ರಶ್ನೆ ಕೇಳಲು ಯಾರೂ ಧೈರ್ಯಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಹಿತ್ತೆ ಜೆಜುಕ್ ಜಬಾಬ್ ದಿವ್ಕ್ ಕೊನಾಕ್ಬಿ ಹೊವ್ಕ್ ನಾ. ತ್ಯಾ ದಿಸಾಕ್ನಾ ಜೆಜುಕ್ ಸವಾಲ್ ಇಚಾರುಕ್ ಕೊನಾಕ್ಬಿ ಧೈರೊ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:46
12 ತಿಳಿವುಗಳ ಹೋಲಿಕೆ  

ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು - ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.


ಆತನನ್ನು ಇನ್ನೇನು ಕೇಳುವದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಅವರು ಅದಕ್ಕೆ ಉತ್ತರ ಕೊಡಲಾರದೆ ಇದ್ದರು.


ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು; ಮತ್ತು ಕ್ಷೇಮಹೊಂದಿದ ಆ ಮನುಷ್ಯನು ಅವರ ಕೂಡ ನಿಂತಿರುವದನ್ನು ನೋಡಿ ಪ್ರತಿಯಾಗಿ ಏನೂ ಮಾತಾಡಲಾರದೆ ಇದ್ದರು.


ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ನಾಚಿಕೊಂಡರು; ಗುಂಪುಕೂಡಿದ್ದ ಜನರೆಲ್ಲಾ ಆತನಿಂದಾಗುತ್ತಿದ್ದ ಎಲ್ಲಾ ಮಹತ್ವದ ಕಾರ್ಯಗಳಿಗೆ ಸಂತೋಷಪಟ್ಟರು.


ಕಡೆಗೆ ಅವರು - ನಾವರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ - ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ.


ದಾವೀದನು ಆತನನ್ನು ಒಡೆಯನೆಂದು ಹೇಳಿದ ಮೇಲೆ ಆತನು ಅವನಿಗೆ ಮಗನಾಗುವದು ಹೇಗೆ? ಅಂದನು.


ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮ ಇಸಾಕ ಯಾಕೋಬರ ದೇವರು ಎಂದು ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರವಾಗಿ ನೋಡುವದಕ್ಕೆ ಧೈರ್ಯವಿಲ್ಲದವನಾದನು.


ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನಿಗೆ ವಾಸಿಮಾಡಿ ಕಳುಹಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು