Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:5 - ಕನ್ನಡ ಸತ್ಯವೇದವು J.V. (BSI)

5 ಆದರೆ ಅವರು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಅಂತೆಯೇ ಸೇವಕರು ಹೋಗಿ ಆ ಜನರಿಗೆ ತಿಳಿಸಿದರು. ಆದರೆ ಅವರು ಸೇವಕರ ಮಾತಿಗೆ ಕಿವಿಗೊಡಲಿಲ್ಲ. ಒಬ್ಬನು ತನ್ನ ಹೊಲದಲ್ಲಿ ಕೆಲಸ ಮಾಡಲು ಹೊರಟುಹೋದನು. ಬೇರೊಬ್ಬನು ತನ್ನ ವ್ಯಾಪಾರಕ್ಕಾಗಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಆದರೆ ಅವರು ಅದನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಬಲ್ವಲ್ಲ್ಯಾ ಸೈರ್‍ಯಾನಿ ಬಲ್ವಲ್ಲ್ಯಾಕ್ ಧ್ಯಾನುಚ್ ದಿವ್ಕನ್ಯಾತ್, ತೆನಿ ತೆಂಚ್ಯಾ-ತೆಂಚ್ಯಾ ಧಂದ್ಯಾಕ್ನಿ ತೆನಿ ಗೆಲ್ಯಾನಿ; ಎಕ್ಲೊ ಅಪ್ನಾಚ್ಯಾ ಶೆತಾಕ್ಡೆ ಗೆಲೊ, ಅನಿ ಎಕ್ಲೊ ಅಪ್ನಾಚ್ಯಾ ದುಕಾನಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:5
21 ತಿಳಿವುಗಳ ಹೋಲಿಕೆ  

ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ದ್ರೋಹಿಗಳೂ ದುಡುಕಿನವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸದೆ ಭೋಗಗಳನ್ನೇ ಪ್ರೀತಿಸುವವರೂ


ಶರೀರಭಾವದವುಗಳ ಮೇಲೆ ಮನಸ್ಸಿಡುವದು ಮರಣ; ಪವಿತ್ರಾತ್ಮನವುಗಳ ಮೇಲೆ ಮನಸ್ಸಿಡುವದು ಜೀವವೂ ಮನಶ್ಶಾಂತಿಯೂ ಆಗಿದೆ.


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.


ಕೆಲವರು - ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯಮಾಡಿದರು.


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.


ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಎದ್ದುಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿದನು.


ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣು ಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ - ನೀವೆದ್ದು ಈ ಸ್ಥಳವನ್ನು ಬಿಟ್ಟು ಹೋಗಿರಿ, ಯೆಹೋವನು ಈ ಊರನ್ನು ನಾಶಮಾಡುತ್ತಾನೆ ಎಂದು ಹೇಳಿದನು. ಆದರೆ ಅವನು ಅವರಿಗೆ ಗೇಲಿಮಾಡುವವನಾಗಿ ಕಾಣಿಸಿದನು.


ತಿರಿಗಿ ಬೇರೆ ಆಳುಗಳನ್ನು ಕರೆದು - ನೀವು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ ಹೋಗಿ - ಇಗೋ, ಅಡಿಗೆ ಸಿದ್ಧವಾಗಿದೆ; ನನ್ನ ಹೋರಿಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಯಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಊಟಕ್ಕೆ ಬನ್ನಿರೆಂಬದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.


ಉಳಿದವರು ಅವನ ಆಳುಗಳನ್ನು ಹಿಡಿದು ಬೈದು ಕೊಂದುಹಾಕಿದರು.


ಪಾರಿವಾಳ ಮಾರುವವರಿಗೆ - ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ಸಂತೆ ಮಾಡಬೇಡಿರಿ ಎಂದು ಹೇಳಿದನು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು