ಮತ್ತಾಯ 23:15 - ಕನ್ನಡ ಸತ್ಯವೇದವು J.V. (BSI)15 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬನನ್ನು ನಿಮ್ಮ ಮತದಲ್ಲಿ ಸೇರಿಸಿಕೊಳ್ಳುವದಕ್ಕಾಗಿ ಭೂವಿುಯನ್ನೂ ಸಮುದ್ರವನ್ನೂ ಸುತ್ತಿಕೊಂಡು ಬರುತ್ತೀರಿ; ಅವನು ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟಾಗಿ ನರಕ ಪಾತ್ರನಾಗಮಾಡುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ ನಿಮಗೆ ಕಷ್ಟ! ಏಕೆಂದರೆ ಒಬ್ಬನನ್ನು ಮತಾಂತರ ಮಾಡುವುದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ. ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 “ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ಎಕ್ ಮಾನ್ಸಾಕ್ ತುಮ್ಚ್ಯಾ ಶಾಸ್ತರಾ ಸರ್ಕೆ ಚಲಿ ಸರ್ಕೆ ಕರುಕ್ ಮನುನ್ ಸಮುಂದರಾಂಚಿ ಸಮುಂದರಾ ದಾಟುನ್ ತುಮಿ ಜಾತ್ಯಾಶಿ, ಅನಿ ಕೊನ್ಬಿ ಎಕ್ಲೊ ಗಾವ್ಲೊ ತರ್ ತೆಕಾಬಿ ತುಮ್ಚ್ಯಾನ್ ದೊನ್‍ಪಟ್ ನರ್‍ಕಾತ್ ತೆಕಾ ಶಿಕ್ಷಾ ಗಾವುಚಿ ತವ್ಡೆ ಬುರ್ಶೆಪಾನ್ ಶಿಕ್ವುತ್ಯಾಶಿ!” ಅಧ್ಯಾಯವನ್ನು ನೋಡಿ |