Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:3 - ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಅವರು ನಿಮಗೆ ಏನೇನು ಹೇಳುತ್ತಾರೋ ಅದನ್ನೆಲ್ಲಾ ಮಾಡಿರಿ, ಕಾಪಾಡಿಕೊಳ್ಳಿರಿ; ಆದರೆ ಅವರ ನಡತೆಯ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೇ ಹೊರತು ನಡೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಅವರು ನಿಮಗೆ ಹೇಳುವುದನ್ನೆಲ್ಲಾ ಅನುಸರಿಸಿ ನಡೆಯಿರಿ. ಆದರೆ ಅವರ ನಡತೆಗಳ ಪ್ರಕಾರ ನೀವು ನಡೆಯಬೇಡಿರಿ. ಏಕೆಂದರೆ ಅವರು ಹೇಳಿದಂತೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಮನುನ್ ತೆನಿ ಕಾಯ್ ಕರುಚೆ ಮನುನ್ ಸಾಂಗ್ತ್ಯಾತ್ ತೆ ಸಗ್ಳೆ ತುಮಿ ಕರಾ ಅನಿ ಪಾಳಾ; ಖರೆ ತೆಂಚ್ಯಾ ಚಲ್ನುಕಿ ಸರ್ಕೆ ತುಮಿ ಚಲುನಕಾಶಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಶಿಕ್ವುತಾತ್ ಖರೆ ತೆಚ್ಯಾ ಸರ್ಕೆ ಚಲಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:3
16 ತಿಳಿವುಗಳ ಹೋಲಿಕೆ  

ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು; ಇಂಥವರ ಸಹವಾಸವನ್ನೂ ಮಾಡದಿರು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ಪೇತ್ರನೂ ಉಳಿದ ಅಪೊಸ್ತಲರೂ - ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವರಿಂದ ನೇವಿುಸಲ್ಪಟ್ಟವರು.


ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು - ಹೋಗುತ್ತೇನಪ್ಪಾ ಅಂದಾಗ್ಯೂ ಹೋಗಲೇ ಇಲ್ಲ.


ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು ಎಂದು ಹೇಳಿದಿರಿ.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ದೇವರು ಹೀಗೆ ಮಾಡುವದಕ್ಕೆ ನಿನಗೆ ಅಪ್ಪಣೆ ಕೊಡುವದಾದರೆ ನೀನು ಈ ಕೆಲಸದ ಭಾರವನ್ನು ನಿರ್ವಹಿಸಲಾಗುವದು; ಇದು ಮಾತ್ರವಲ್ಲದೆ ಈ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಸಂತೋಷವಾಗಿ ಹೋಗುವರು ಎಂದು ಹೇಳಿದನು.


ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಪೀಠದಲ್ಲಿ ಕೂತುಕೊಂಡಿದ್ದಾರೆ;


ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು