Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:38 - ಕನ್ನಡ ಸತ್ಯವೇದವು J.V. (BSI)

38 ನೋಡಿರಿ, ನಿಮ್ಮ ಆಲಯವು ನಿಮಗೆ ಬರೀದಾಗಿ ಬಿಟ್ಟದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇಗೋ, ನಿಮ್ಮ ದೇವಾಲಯ ಬರಿದಾಗುವುದು, ಪಾಳು ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಈಗ ನಿನ್ನ ಮನೆಯು ಸಂರ್ಪೂಣವಾಗಿ ಬರಿದಾಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತಸೆಮನುನ್ ತುಜ್ಯಾ ಗುಡಿತ್ ಕಾಯ್ಬಿ ಬರೆಪಾನ್ ಹುರಿನಾ. ಅನಿ ತೆ ಪಾಡ್ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:38
21 ತಿಳಿವುಗಳ ಹೋಲಿಕೆ  

ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ. ಇದು ಯೆಹೋವನ ನುಡಿ.


ನೋಡಿರಿ, ನಿಮ್ಮ ಆಲಯವು ನಿಮಗೆ ಬರೀದಾಗಿಬಿಟ್ಟದೆ. ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ ಎಂದು ನೀವು ಹೇಳುವ ತನಕ ನೀವು ನನ್ನನ್ನು ನೋಡುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ಆದರೆ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳುಕೊಳ್ಳಿರಿ.


ಆತನು - ನೀವು ಇವುಗಳನ್ನು ನೋಡುತ್ತೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿವಸಗಳು ಬರುವವು ಅಂದನು.


ಇಸ್ರಾಯೇಲ್ಯರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಾಯೇಲ್ಯರು ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ ಆಸ್ಪದರಾಗುವರು.


ಇದಲ್ಲದೆ ಹಾಳುಮಾಡುವ ಅಸಹ್ಯ ವಸ್ತುವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ.


ಆಗ ಆತನು - ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ, ಎಲ್ಲಾ ಕೆಡವಲ್ಪಡುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


(ಯೆಹೋವನು ಇಂತೆನ್ನುತ್ತಾನೆ - ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು).


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; ನಿನ್ನ ಕೋಪಾಗ್ನಿಯು ಅವರನ್ನು ಆಹುತಿಗೊಳ್ಳಲಿ.


ಅವರ ಪಾಳೆಯವು ಹಾಳುಬೀಳಲಿ; ಅವರ ನಿವಾಸಗಳು ಜನಶೂನ್ಯವಾಗಲಿ.


ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನ ಒಂದು ಮಾತು ಬಿದ್ದಿತು, ನೋಡಿರಿ - ಸೊಗಸಾದ ಅನೇಕ ದೊಡ್ಡ ಮನೆಗಳು ವಾಸಿಸುವವರೇ ಇಲ್ಲದೆ ಖಂಡಿತವಾಗಿ ಹಾಳಾಗುವವು.


[ಯೆಹೋವನು ಇಂತೆನ್ನುತ್ತಾನೆ - ] ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೊತ್ತಲಗಳು ಪಾಳುಬಿದ್ದವು, ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ, ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಿವಾಸವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು