Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:39 - ಕನ್ನಡ ಸತ್ಯವೇದವು J.V. (BSI)

39 ಈಗಿನಿಂದ - ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ ಎಂದು ನೀವು ಹೇಳುವ ತನಕ ನೀವು ನನ್ನನ್ನು ನೋಡುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಈಗಿಂದ, ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಏಕೆಂದರೆ, ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು!’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಮತ್ತೆ ಕಾಣಲಾರಿರಿ ಎಂಬುದು ನಿಶ್ಚಯ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನಾನು ನಿನಗೆ ಹೇಳುವುದೇನೆಂದರೆ, ‘ಪ್ರಭುವಿನ ಹೆಸರಿನಲ್ಲಿ ಬರುವಾತನನ್ನು ದೇವರು ಆಶೀರ್ವದಿಸಲಿ’ ಎಂದು ನೀನು ಹೇಳುವ ತನಕ ನನ್ನನ್ನು ನೋಡುವುದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಏಕೆಂದರೆ, ‘ಕರ್ತನ ಹೆಸರಿನಲ್ಲಿ ಬರುವವರು ಧನ್ಯರು’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಮಿಯಾ ತುಕಾ ಸಾಂಗ್ತಾ, ಹಿತ್ನಾ ಫಿಡೆ ಸರ್ವೆಸ್ವರಾಚ್ಯಾ ನಾವಾನ್ ಯೆತಲ್ಯಾಕ್ ಆಶಿರ್ವಾದ್ ಹೊಂವ್ದಿ. ಮನುನ್ ತಿಯಾ ಮನಿ ಪತರ್ ಮಾಕಾ ತಿಯಾ ಬಗಿನೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:39
15 ತಿಳಿವುಗಳ ಹೋಲಿಕೆ  

ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡೇನೆಂದು ಉಲ್ಲಾಸಪಟ್ಟನು; ಅದನ್ನು ನೋಡಿ ಸಂತೋಷಗೊಂಡನು ಅಂದನು.


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.


ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಒಂದು ಕಾಲ ಬರುತ್ತದೆ, ಅದರಲ್ಲಿ ನೀವು ಮನುಷ್ಯಕುಮಾರನ ದಿವಸಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.


ಯೇಸು ಅವನಿಗೆ - ಫಿಲಿಪ್ಪನೇ, ನಾನು ಇಷ್ಟು ದಿವಸ ನಿಮ್ಮ ಸಂಗಡ ಇದ್ದರೂ ನೀನು ಇನ್ನೂ ನನ್ನನ್ನು ಅರಿತುಕೊಳ್ಳಲಿಲ್ಲವೇ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ನಮಗೆ ತಂದೆಯನ್ನು ತೋರಿಸೆಂದು ನೀನು ಹೇಳುವದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು