Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:7 - ಕನ್ನಡ ಸತ್ಯವೇದವು J.V. (BSI)

7 ಜನರಿಂದ ಬೋಧಕರನ್ನಿಸಿಕೊಳ್ಳುವದು, ಇವುಗಳೇ ಅವರಿಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮಾರುಕಟ್ಟೆಗಳಲ್ಲಿ ಜನರು ತಮಗೆ ಮರ್ಯಾದೆ ತೋರಿಸಬೇಕೆಂದು ಆಶಿಸುತ್ತಾರೆ; ಜನರಿಂದ ಉಪದೇಶಕರೆನಿಸಿಕೊಳ್ಳಲು ಇಷ್ಟಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ, ‘ಬೋಧಕರೇ,’ ಎಂದು ಕರೆಯಿಸಿಕೊಳ್ಳಲು ಅವರು ಇಚ್ಛಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಬಾಜಾರಾತ್ನಿ ಲೊಕಾನಿಕ್ನಾ ನಮಸ್ಕಾರ್ ಕರುನ್ ಘೆತಲೆ ಅನಿ ಗುರು ಮನುನ್ ಬಲ್ವುನ್ ಘೆತಲಿ ತೆಂಕಾ ಲೈ ಕುಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:7
19 ತಿಳಿವುಗಳ ಹೋಲಿಕೆ  

ಯೇಸು ಹಿಂತಿರುಗಿ ಅವರು ತನ್ನ ಹಿಂದೆ ಬರುವದನ್ನು ಕಂಡು - ನಿಮಗೆ ಏನು ಬೇಕಾಗಿದೆ ಎಂದು ಕೇಳಲು ಅವರು - ರಬ್ಬಿಯೇ, ನೀನು ಇಳುಕೊಂಡಿರುವದು ಎಲ್ಲಿ? ಅಂದರು. (ರಬ್ಬಿ ಅಂದರೆ ಗುರು).


ಅದಕ್ಕೆ ನತಾನಯೇಲನು - ಗುರುವೇ, ನೀನು ದೇವಕುಮಾರನು ಸರಿ; ನೀನೇ ಇಸ್ರಾಯೇಲಿನ ಅರಸನು ಅಂದನು.


ಯೇಸು ಆಕೆಗೆ - ಮರಿಯಳೇ, ಎಂದು ಹೇಳಿದನು. ಆಕೆ ತಿರುಗಿಕೊಂಡು ಇಬ್ರಿಯ ಮಾತಿನಲ್ಲಿ - ರಬ್ಬೂನಿ, ಅಂದಳು. (ರಬ್ಬೂನಿ ಅಂದರೆ ಗುರುವೇ ಎಂದು ಅರ್ಥ).


ಮತ್ತು ಸಮುದ್ರದ ಆಚೇಕಡೆಯಲ್ಲಿ ಆತನನ್ನು ಕಂಡುಕೊಂಡು - ಗುರುವೇ, ಯಾವಾಗ ಇಲ್ಲಿಗೆ ಬರೋಣವಾಯಿತು? ಎಂದು ಕೇಳಿದ್ದಕ್ಕೆ,


ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ - ಗುರುವೇ, ಯೊರ್ದನ್‍ಹೊಳೆಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಅವನೂ ಸ್ನಾನ ಮಾಡಿಸುತ್ತಾನೆ, ಅವನ ಬಳಿಗೆ ಎಲ್ಲರು ಹೋಗುತ್ತಾರೆ ಎಂದು ಹೇಳಲು


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.


ಯೇಸು ಅವನನ್ನು - ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಲು ಆ ಕುರುಡನು - ನನಗೆ ಕಣ್ಣು ಬರುವಂತೆ ಮಾಡಬೇಕು, ಗುರುವೇ, ಅಂದನು.


ಆಗ ಪೇತ್ರನು ಯೇಸುವಿಗೆ - ಗುರುವೇ, ನಾವು ಇಲ್ಲೇ ಇರುವದು ಒಳ್ಳೇದು; ಮೂರು ಪರ್ಣಶಾಲೆಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು.


ಆದರೆ ನೀವು ಬೋಧಕರನ್ನಿಸಿಕೊಳ್ಳಬೇಡಿರಿ; ಒಬ್ಬನೇ ನಿಮ್ಮ ಬೋಧಕನು, ನೀವೆಲ್ಲರು ಸಹೋದರರು.


ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕೂತುಕೊಂಡು ತಮ್ಮ ಗೆಳೆಯರಿಗೆ -


ಆಗ ಆತನನ್ನು ಹಿಡುಕೊಡಬೆಕೆಂದಿದ್ದ ಯೂದನು - ಗುರುವೇ, ನಾನಲ್ಲವಲ್ಲ? ಅನ್ನಲಾಗಿ ಯೇಸು ಅವನಿಗೆ - ನೀನೇ ಹೇಳಿದ್ದೀ ಎಂದು ಹೇಳಿದನು.


ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ, ನಮಸ್ಕಾರ ಎಂದು ಹೇಳಿ ಆತನಿಗೆ ಮುದ್ದಿಟ್ಟನು.


ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಸಿಕೊಂಡು ಆತನಿಗೆ - ಗುರುವೇ, ಇಗೋ, ನೀನು ಶಾಪಕೊಟ್ಟ ಅಂಜೂರದ ಮರವು ಒಣಗಿಹೋಗಿದೆ ಎಂದು ಹೇಳಿದ್ದಕ್ಕೆ


ಸಾಧಾರಣ ಜನರು ಆತನ ಮಾತನ್ನು ಸಂತೋಷದಿಂದ ಕೇಳುತ್ತಿದ್ದರು. ಆತನು ಉಪದೇಶಮಾಡಿ ಹೇಳಿದ್ದೇನಂದರೆ - ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದು, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು,


ಅಲ್ಲಿಗೆ ಬಂದ ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ ಎಂದು ಹೇಳಿ


ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳೂ ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳೂ ನಿಮಗೆ ಇಷ್ಟ.


ಅಷ್ಟರೊಳಗೆ ಶಿಷ್ಯರು - ಗುರುವೇ, ಊಟಮಾಡು ಎಂದು ಆತನನ್ನು ಬೇಡಿಕೊಂಡರು.


ಆತನ ಶಿಷ್ಯರು - ಗುರುವೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಯಾರು ಪಾಪಮಾಡಿದರು? ಇವನೋ? ಇವನ ತಂದೆತಾಯಿಗಳೋ? ಎಂದು ಆತನನ್ನು ಕೇಳಿದ್ದಕ್ಕೆ


ಶಿಷ್ಯರು - ಗುರುವೇ, ಯೆಹೂದ್ಯರು ಆಗಲೇ ನಿನ್ನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು; ತಿರಿಗಿ ಅಲ್ಲಿಗೇ ಹೋಗುತ್ತೀಯಾ? ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು