Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:13 - ಕನ್ನಡ ಸತ್ಯವೇದವು J.V. (BSI)

13 ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ಕೊನೆಯವರೆಗೂ ಸ್ಥಿರವಾಗಿರುವವರು ಜೀವೋದ್ಧಾರವನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಕಡೆಯವರೆಗೂ ದೃಢವಾಗಿರುವವನು ರಕ್ಷಣೆಹೊಂದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಜೆ ಕೊನ್ ಅಕ್ರಿ ಪತರ್ ಘಟ್ ರ್‍ಹಾತಾ ತೊ ಹುರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:13
12 ತಿಳಿವುಗಳ ಹೋಲಿಕೆ  

ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಮತ್ತು ನನ್ನ ಹೆಸರಿನ ನಿವಿುತ್ತವಾಗಿ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆ ಹೊಂದುವನು.


ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪು ಹೊರಿಸಲಾಗದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳಬೇಕಾಗಿರುವದು. ಕಳವಳಪಡದಂತೆ ನೋಡಿಕೊಳ್ಳಿರಿ; ಯಾಕಂದರೆ ಹಾಗಾಗುವದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.


ಇದಲ್ಲದೆ ಅಧರ್ಮವು ಹೆಚ್ಚಾಗುವದರಿಂದ ಬಹುಜನರ ಪ್ರೀತಿಯು ತಣ್ಣಗಾಗಿಹೋಗುವದು.


ನಿಮ್ಮ ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು