Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:3 - ಕನ್ನಡ ಸತ್ಯವೇದವು J.V. (BSI)

3 ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕೂತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು - ಅದು ಯಾವಾಗ ಆಗುವದು? ನೀನು ಪ್ರತ್ಯಕ್ಷನಾಗುವದಕ್ಕೂ ಯುಗದ ಸಮಾಪ್ತಿಗೂ ಸೂಚನೆಯೇನು? ನಮಗೆ ಹೇಳು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಾನಾ ಜೆಜು ಒಲಿವ್ ಮನ್ತಲ್ಯಾ ಮಡ್ಡಿ ವರ್‍ತಿ ಬಸಲ್ಲೊ, ತನ್ನಾ ಶಿಸಾ ಎವ್ಡಿಚ್ ಕಡೆಕ್ ಜೆಜುಕ್ಡೆ ಯೆಲಿ ಅನಿ ತೆನಿ ಜೆಜುಕ್ “ಹೆ ಸಗ್ಳೆ ಕನ್ನಾ ಹೊತಾ, ಅನಿ ಹ್ಯೊಚ್ ಸರ್‍ತೊ ಕಾಲ್ ಅನಿ ತಿಯಾ ಯೆತಲೊ ಕಾಲ್ ಮನುನ್ ದಾಕ್ವುನ್ ದಿವ್ಕ್ ತನ್ನಾ ಕಾಯ್-ಕಾಯ್ ಹೊತಾ.” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:3
23 ತಿಳಿವುಗಳ ಹೋಲಿಕೆ  

ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.


ನೋಹನ ದಿವಸಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯೂ ಇರುವದು.


ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವದು. ದೇವದೂತರು ಹೊರಟುಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆಮಾಡಿ ಅವರನ್ನು ಬೆಂಕೀಕೊಂಡದಲ್ಲಿ ಹಾಕುವರು.


ಅವರು - ಬೋಧಕನೇ, ಅದು ಯಾವಾಗ ಆಗುವದು? ಅದು ಸಂಭವಿಸುವದಕ್ಕಿರುವಾಗ ಯಾವ ಸೂಚನೆ ತೋರುವದು ಎಂದು ಆತನನ್ನು ಕೇಳಲು


ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ


ಪ್ರಳಯದ ನೀರು ಬಂದು ಎಲ್ಲರನ್ನು ಬಡುಕೊಂಡುಹೋಗುವ ತನಕ ಏನೂ ತಿಳಿಯದೆ ಇದ್ದರಲ್ಲಾ. ಅದರಂತೆ ಮನುಷ್ಯಕುಮಾರನು ಪ್ರತ್ಯಕ್ಷನಾಗುವ ಕಾಲದಲ್ಲಿಯೂ ಇರುವದು.


ಹೇಗೆ ವಿುಂಚು ಮೂಡಣದಲ್ಲಿ ಹುಟ್ಟಿ ಪಡುವಣದವರೆಗೂ ಕಾಣಿಸುತ್ತದೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯು ಇರುವದು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು - ಅದನ್ನು ಬಿಡಿಸಲಿಕ್ಕೆ ನವ್ಮಿುಂದ ಯಾಕೆ ಆಗಲಿಲ್ಲವೆಂದು ಕೇಳಲು ಆತನು ಅವರಿಗೆ -


ಕಳ್ಳನು ಬರುವ ಜಾವ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.


ಆಗ ಶಿಷ್ಯರು ಬಂದು ಆತನನ್ನು - ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ ಎಂದು ಕೇಳಿದರು.


ಆಗ ಯೇಸು ಜನರನ್ನು ಬಿಟ್ಟು ಮನೆಗೆ ಹೋದ ಮೇಲೆ ಆತನ ಶಿಷ್ಯರು ಬಂದು - ಹೊಲದಲ್ಲಿಯ ಹಣಜಿಯ ಸಾಮ್ಯದ ಅರ್ಥವನ್ನು ನಮಗೆ ಹೇಳು ಅಂದರು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು