Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:39 - ಕನ್ನಡ ಸತ್ಯವೇದವು J.V. (BSI)

39 ಪ್ರಳಯದ ನೀರು ಬಂದು ಎಲ್ಲರನ್ನು ಬಡುಕೊಂಡುಹೋಗುವ ತನಕ ಏನೂ ತಿಳಿಯದೆ ಇದ್ದರಲ್ಲಾ. ಅದರಂತೆ ಮನುಷ್ಯಕುಮಾರನು ಪ್ರತ್ಯಕ್ಷನಾಗುವ ಕಾಲದಲ್ಲಿಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು. “ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಅಶೆ ಸಗ್ಳ್ಯಾ ಜಿಮ್ನಿರ್ ಪಾನಿಭರುನ್ ಸಗ್ಳೆ ಹೊವ್ನ್ ಜಾಯ್ ಪತರ್‍ಬಿ ತೆಂಕಾ ಕಾಯ್ಬಿ ಕಳುಕ್ ನಾ. ತಸೆಚ್ ಮಾನ್ಸಾಚೊ ಲೆಕ್ ಯೆತಲ್ಯಾ ಎಳಾರ್‍ಬಿ ಘಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:39
18 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ಮಾಡುವವರು ಬೆಳಕನ್ನು ಸಹಿಸುವದಿಲ್ಲ, ತಮ್ಮ ಕೃತ್ಯಗಳು ದುಷ್ಕೃತ್ಯಗಳಾಗಿ ತೋರಿಬಂದಾವೆಂದು ಬೆಳಕಿಗೆ ಬರುವದಿಲ್ಲ;


ನೋಹನ ದಿವಸಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯೂ ಇರುವದು.


ಎಲೈ ತಿರಸ್ಕಾರಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದು ಎಂದು ಹೇಳಿದನು.


ಹೀಗೆ ಮಾತಾಡುವವರು ಒಂದು ಸಂಗತಿಯನ್ನು ತಿಳಿದರೂ ಬೇಕೆಂದು ಮರೆತು ಬಿಡುತ್ತಾರೆ; ಅದೇನಂದರೆ - ಪೂರ್ವಕಾಲದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನಿಂದ ಉಂಟಾಗಿ ನೀರಿನಿಂದ ಆಧಾರಗೊಂಡಿರುವಲ್ಲಿ


ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು; ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.


ಇದು ನನಗೆ ಗೊತ್ತಿರಲಿಲ್ಲ ಎಂದು ನೀನು ನೆವ ಹೇಳಿದರೆ ಹೃದಯಶೋಧಕನು ಗ್ರಹಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆಬಿಟ್ಟಾನೇ?


ಆಗ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹತ್ತಿತು, ಆದರೆ ಅವರು ತಿಳಿಯಲಿಲ್ಲ; ದಹಿಸಿತು, ಲಕ್ಷ್ಯಕ್ಕೆ ತರಲಿಲ್ಲ.


ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ; ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.


ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹು ಘೋರವಾಯಿತು. ತಮಗೆ ಅಪಾಯವು ಒದಗಿ ಬಂದದೆ ಎಂಬದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಲಿಲ್ಲ.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಮನುಷ್ಯರು ಮೊದಲುಗೊಂಡು ಪಶುಪಕ್ಷಿಕ್ರಿವಿುಗಳವರೆಗೂ ಭೂವಿುಯ ಮೇಲಿದ್ದದ್ದೆಲ್ಲಾ ನಾಶವಾಯಿತು; ಅವು ಭೂವಿುಯ ಮೇಲಿನಿಂದ ಲಯವಾಗಿ ಹೋದವು. ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದರು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕೂತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು - ಅದು ಯಾವಾಗ ಆಗುವದು? ನೀನು ಪ್ರತ್ಯಕ್ಷನಾಗುವದಕ್ಕೂ ಯುಗದ ಸಮಾಪ್ತಿಗೂ ಸೂಚನೆಯೇನು? ನಮಗೆ ಹೇಳು ಅನ್ನಲು


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ಆವಾಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಬಿಡಲ್ಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು