Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:4 - ಕನ್ನಡ ಸತ್ಯವೇದವು J.V. (BSI)

4 ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನಂದರೆ - ಯಾರಾದರೂ ನಿಮ್ಮನ್ನು ಮೋಸಗೊಳಿಸಾರು ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು ಅವರಿಗೆ ಕೊಟ್ಟ ಉತ್ತರವಿದು: “ಎಚ್ಚರವಾಗಿರಿ! ನಿಮ್ಮನ್ನು ಮೋಸಗೊಳಿಸಲು ಯಾರಿಗೂ ಅವಕಾಶ ಕೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೇಸು ಉತ್ತರವಾಗಿ ಅವರಿಗೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೆಜುನ್ ತೆಂಕಾ,“ಕೊನ್ಬಿ ತುಮ್ಕಾ ಚುಕ್ ವಾಟೆಕ್ ನ್ಹೆಯ್‍ ನಸಿ ಸರ್ಕೆ ಉಶಾರ್ಕಿನ್ ರ್‍ಹಾವಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:4
14 ತಿಳಿವುಗಳ ಹೋಲಿಕೆ  

ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡದಿರಿ;


ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನಬೋಧೆಯಿಂದ ನಿಮ್ಮ ಮನಸ್ಸನ್ನು ಕೆಡಿಸಿ ನಿಮ್ಮನ್ನು ವಶಮಾಡಿಕೊಂಡಾರು, ಎಚ್ಚರಿಕೆಯಾಗಿರ್ರಿ.


ಹುರುಳಿಲ್ಲದ ಮಾತುಗಳನ್ನಾಡುವವರಿಗೆ ಕಿವಿಗೊಟ್ಟು ಮೋಸಹೋಗಬೇಡಿರಿ; ಅಂಥ ಕೃತ್ಯಗಳ ನಿವಿುತ್ತದಿಂದ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಮೋಸಗೊಳಿಸುವದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ನೂಕಿಸಿಕೊಂಡು ಹೋಗುವವರ ಹಾಗಿರಬಾರದು.


ಆತನು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ನೋಡಿಕೊಳ್ಳಿರಿ. ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು ನಾನು ಕ್ರಿಸ್ತನು ನಾನು ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ.


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ಯೆಹೋವನು ಇಂತೆನ್ನುತ್ತಾನೆ - ಕಸ್ದೀಯರು ನಮ್ಮಿಂದ ತೊಲಗಿ ಹೋಗುವದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.


ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿದವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು