Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:42 - ಕನ್ನಡ ಸತ್ಯವೇದವು J.V. (BSI)

42 ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ನಿಮ್ಮ ಪ್ರಭು ಬರುವ ದಿನ ನಿಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತಸೆಮನುನ್ ತುಮಿ ಉಶಾರ್‍ಕಿನ್ ರ್‍ಹಾವಾ; ಖಲ್ಯಾ ದಿಸಿ ತುಮ್ಚೊ ಧನಿ ಯೆತಾ ಮನ್ತಲೆ ತುಮ್ಕಾ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:42
17 ತಿಳಿವುಗಳ ಹೋಲಿಕೆ  

ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಆದಕಾರಣ ನಾವು ಇತರರಂತೆ ನಿದ್ದೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.


ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.


(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ಇದಲ್ಲದೆ ಆ ದಿನದ ವಿಷಯವೂ ಆ ಗಳಿಗೆಯ ವಿಷಯವೂ ನನ್ನ ತಂದೆಯೊಬ್ಬನಿಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು, ಮಗನಿಗೂ ತಿಳಿಯದು.


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ವಿಮೋಚನೆಯು ಹತ್ತಿರವಾಯಿತು.


ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ.


ಕಳ್ಳನು ಬರುವ ಜಾವ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.


ಅವರು ಕೊಂಡುಕೊಳ್ಳಲಿಕ್ಕೆ ಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಕ್ಕೆ ಹೋದರು. ಬಾಗಿಲು ಮುಚ್ಚಲಾಯಿತು.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು