Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:5 - ಕನ್ನಡ ಸತ್ಯವೇದವು J.V. (BSI)

5 ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು - ನಾನು ಕ್ರಿಸ್ತನು, ನಾನು ಕ್ರಿಸ್ತನು ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಲೈ ಲೊಕಾ ಮಾಜ್ಯಾ ವಿಶಯಾತ್ ಬೊಲ್ತ್ಯಾತ್ ಅನಿ ಮಾಜ್ಯಾ ನಾವಾನ್ ಯೆತಾತ್ ಅನಿ “ಮಿಯಾಚ್ ಕ್ರಿಸ್ತ್!” ಮನುನ್ ಸಾಂಗುನ್ ಲೈ ಲೊಕಾಕ್ನಿ ತೆನಿ ಚುಕ್ ವಾಟೆಕ್ ನ್ಹೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:5
15 ತಿಳಿವುಗಳ ಹೋಲಿಕೆ  

ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಬಹುಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.


ಆಗ ಯೆಹೋವನು ನನಗೆ ಹೀಗೆ ನುಡಿದನು - ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ; ಅವರು ಸುಳ್ಳಾದ ದಿವ್ಯದರ್ಶನವನ್ನೂ ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಮಕ್ಕಳಿರಾ, ಇದು ಕಡೇ ಗಳಿಗೆಯಾಗಿದೆ; ಕ್ರಿಸ್ತವಿರೋಧಿ ಬರುತ್ತಾನೆಂದು ನೀವು ಕೇಳಿದ್ದೀರಷ್ಟೆ; ಈಗಲೂ ಕ್ರಿಸ್ತವಿರೋಧಿಗಳು ಬಹುಮಂದಿ ಎದ್ದಿದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ತಿಳುಕೊಳ್ಳುತ್ತೇವೆ.


ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ನಾನು ನನ್ನ ತಂದೆಯ ಹೆಸರಿನ ಮೇಲೆ ಬಂದಿದ್ದೇನೆ; ನನ್ನನ್ನು ನೀವು ಒಪ್ಪಿಕೊಳ್ಳುವದಿಲ್ಲ; ಮತ್ತೊಬ್ಬನು ಸ್ವಂತ ಹೆಸರಿನ ಮೇಲೆ ಬಂದರೆ ಅವನನ್ನು ಒಪ್ಪಿಕೊಳ್ಳುವಿರಿ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ತಾವೇ ಪ್ರವಾದಿಸಿದರು.


ಯೆಹೋವನು ಇಂತೆನ್ನುತ್ತಾನೆ - ಕಸ್ದೀಯರು ನಮ್ಮಿಂದ ತೊಲಗಿ ಹೋಗುವದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.


ಯೇಸುವು ಕ್ರಿಸ್ತನಲ್ಲ ಎನ್ನುವವನು ಸುಳ್ಳುಗಾರನಲ್ಲವಾದರೆ ಸುಳ್ಳುಗಾರನು ಬೇರೆ ಎಲ್ಲಿದ್ದಾನೆ? ಯಾವನಾದರೂ ತಾನು ತಂದೆಯನ್ನೂ ಮಗನನ್ನೂ ಅರಿಯೆನು ಎಂದು ಹೇಳಿದರೆ ಅವನೇ ಕ್ರಿಸ್ತ ವಿರೋಧಿ.


ಯೇಸುವನ್ನು ಒಪ್ಪದೆ ಇರುವ ಆತ್ಮವು ದೇವರಿಂದ ಪ್ರೇರಿತವಾದದ್ದಲ್ಲ; ಅದು ಕ್ರಿಸ್ತ ವಿರೋಧಿಯ ಆತ್ಮವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿದ್ದೀರಲ್ಲಾ; ಈಗಲೂ ಲೋಕದಲ್ಲಿ ಅದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು