Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:7 - ಕನ್ನಡ ಸತ್ಯವೇದವು J.V. (BSI)

7 ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜನಾಂಗಕ್ಕೆ ವಿರುದ್ಧ ಜನಾಂಗವೂ ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರವೂ ಯುದ್ಧಕ್ಕಿಳಿಯುವುವು. ಅಲ್ಲಲ್ಲಿ ಕ್ಷಾಮಡಾಮರಗಳೂ ಭೂಕಂಪಗಳೂ ಸಂಭವಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದೆಸಾ ಎಕಾಮೆಕಾಕ್ಡೆ ಝಗ್ಡೆ ಕರುನ್ ಘೆತ್ಯಾತ್, ಅನಿ ರಾಜಾಬಿ ಎಕಾಮೆಕಾ ವರ್‍ತಿ ಝಗ್ಡುನ್ಗೆತ್ ರ್‍ಹಾತ್ಯಾತ್, ಬರಗಾಲಾ ಪಡ್ತ್ಯಾತ್, ಅನಿ ಸಗ್ಳ್ಯಾಕ್ಡೆ ಭುಕಂಪಾ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:7
20 ತಿಳಿವುಗಳ ಹೋಲಿಕೆ  

ಮತ್ತು ಮಹಾಭೂಕಂಪಗಳಾಗುವವು; ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು; ಉತ್ಪಾತಗಳೂ ಆಕಾಶದಲ್ಲಿ ಮಹಾ ಸೂಚನೆಗಳೂ ತೋರುವವು.


ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ಅವನ ಹಿಂದೆ ಪಾತಾಳವೆಂಬವನು ಬಂದನು. ಅವರಿಗೆ ಭೂವಿುಯ ಕಾಲುಭಾಗದಲ್ಲಿ ಕತ್ತಿಯಿಂದಲೂ ಬರದಿಂದಲೂ ಅಂಟುರೋಗದಿಂದಲೂ ಕಾಡುಮೃಗಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಐಗುಪ್ತ್ಯರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು; ಅಣ್ಣತಮ್ಮಂದಿರು, ನೆರೆಹೊರೆಯವರು, ಪಟ್ಟಣ ಪಟ್ಟಣಗಳು, ರಾಷ್ಟ್ರ ರಾಷ್ಟ್ರಗಳು ಪರಸ್ಪರವಾಗಿ ಹೋರಾಡುವವು.


ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವದು; ಒಬ್ಬರ ಕೈಯನ್ನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.


ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;


ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರದ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದನು. ನೀವಾದರೋ ಸ್ಥಿರಚಿತ್ತರಾಗಿರಿ;


ಆತನು ಆರನೆಯ ಮುದ್ರೆ ಒಡೆಯುವದನ್ನು ಕಂಡೆನು. ಒಡೆದಾಗ ಮಹಾಭೂಕಂಪ ಉಂಟಾಯಿತು; ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು;


ಇನ್ನೊಂದೇ ಸಾರಿ ಎಂಬೀ ಮಾತನ್ನು ಯೋಚಿಸಿದರೆ ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡಬೇಕೆಂಬದು ಸ್ಪಷ್ಟವಾಗುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.


ನಾನು ದೊಬ್ಬಿಬಿಡುವೆನು, ದೊಬ್ಬಿಬಿಡುವೆನು, ದೊಬ್ಬಿಬಿಡುವೆನು; [ರಾಜ್ಯಕ್ಕೆ] ಬಾಧ್ಯನು ಬರುವದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಖಡ್ಗ ಕ್ಷಾಮ ದುಷ್ಟಮೃಗ ವ್ಯಾಧಿ ಎಂಬೀ ನಾಲ್ಕು ಬಾಧೆಗಳನ್ನು ಯೆರೂಸಲೇವಿುನ ಮೇಲೆ ಒಟ್ಟಿಗೆ ತಂದು ಜನಪಶುಗಳನ್ನು ನಿರ್ಮೂಲಮಾಡುವಾಗ ಹೇಳತಕ್ಕದ್ದೇನು!


ಕರ್ತನ ಆಗಮನದ ಗಂಭೀರವಾದ ಮಹಾದಿನವು ಬರುವದಕ್ಕೆ ಮುಂಚೆ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂವಿುಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ, ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು;


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ಆ ನಗರಿಯನ್ನು ರಕ್ಷಿಸುವನು.


ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು - ಬಾ ಅನ್ನುವದನ್ನು ಕೇಳಿದೆನು. ಆಗ ಇಗೋ, ಕಪ್ಪು ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು .


ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಅದು - ರೂಪಾಯಿಗೆ ಒಂದು ಸೇರು ಗೋದಿ; ರೂಪಾಯಿಗೆ ಮೂರು ಸೇರು ಜವೆ ಗೋದಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡ ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು