Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:9 - ಕನ್ನಡ ಸತ್ಯವೇದವು J.V. (BSI)

9 ಆಗ ನಿಮ್ಮನ್ನು ಉಪದ್ರವಕ್ಕೆ ಒಪ್ಪಿಸಿ ಕೊಲ್ಲುವರು; ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ಹಗೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ತುಮ್ಕಾ ಸಗ್ಳ್ಯಾಕ್ನಿ ಧರುನ್ ಹೊತಾ ಅನಿ ಶಿಕ್ಷಾ ದಿವ್ನ್ ಹೊತಾ, ಅನಿ ಜಿವಾನಿ ಮಾರುನ್ ಹೊತಾ. ಮಾಕಾ ಲಾಗುನ್ ಸಗ್ಳ್ಯಾ ದೆಸಾಂಚಿ ಲೊಕಾ ತುಮ್ಕಾ ಧುರ್ ಕರ್‍ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:9
26 ತಿಳಿವುಗಳ ಹೋಲಿಕೆ  

ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.


ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -


ಆದದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.


ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಆದರೆ ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವದು ನಮಗೆ ಯುಕ್ತವೆಂದು ತೋರುತ್ತದೆ. ಆ ಮತದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತಾಡುತ್ತಾರೆಂಬದೊಂದೇ ನಮಗೆ ಗೊತ್ತದೆ ಅಂದರು.


ಉಳಿದವರು ಅವನ ಆಳುಗಳನ್ನು ಹಿಡಿದು ಬೈದು ಕೊಂದುಹಾಕಿದರು.


ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು; ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.


ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ ಅವರು ಬಹು ದಿವಸ ಕತ್ತಿ ಬೆಂಕಿ ಸೆರೆಸೂರೆಗಳಿಗೆ ಸಿಕ್ಕಿಬೀಳುತ್ತಿರುವರು.


ಲೋಕವು ನಿಮ್ಮ ಮೇಲೆ ದ್ವೇಷಮಾಡುವದಾದರೆ ಅದು ಮೊದಲು ನನ್ನ ಮೇಲೆ ದ್ವೇಷಮಾಡಿತೆಂದು ತಿಳುಕೊಳ್ಳಿರಿ.


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿವಿುತ್ತ ನಿಮಗೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು