Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:21 - ಕನ್ನಡ ಸತ್ಯವೇದವು J.V. (BSI)

21 ಅವನ ಧಣಿಯು - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಮಾಲ್ಕಾನ್, ಶಬ್ಬಾಸ್, ಮಾಜ್ಯಾ ಬರ್‍ಯಾ ಅನಿ ವಿಶ್ವಾಸಾಚ್ಯಾ ಆಳಾ! ಬಾರಿಕ್ಲ್ಯಾ ಕಾಮಾತುಚ್ ತಿಯಾ ವಿಸ್ವಾಸಾಚೊ ಮನುನ್ ದಾಕ್ವುನ್ ದಿಲೆಯ್. ತಸೆಮನುನ್ ಮಿಯಾ ತುಕಾ ಲೈ ಮೊಟ್ಯಾ ಜವಾಬ್ದಾರಿಚೆ ಕಾಮ್ ದಿತಾ. ಯೆ ಅನಿ ಮಾಜ್ಯಾ ಕುಶಿತ್ ಭಾಗ್ ಘೆ! ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:21
30 ತಿಳಿವುಗಳ ಹೋಲಿಕೆ  

ಅವನ ಧಣಿಯು ಅವನಿಗೆ - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಎಂದು ಹೇಳಿದನು.


ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು; ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾದವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗುವನು.


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಆದರೆ ಒಳಗೆ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಹೃದಯದಲ್ಲಿ ಆಗುವ ಸುನ್ನತಿಯೇ ಸುನ್ನತಿ. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮ ಸಂಬಂಧಪಟ್ಟದ್ದೇ; ಇಂಥಾ ಸುನ್ನತಿಯಿದ್ದವನಿಗೆ ಬರುವ ಹೊಗಳಿಕೆಯು ದೇವರಿಂದಲೇ ಹೊರತು ಮನುಷ್ಯರಿಂದ ಬರುವದಲ್ಲ.


ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ನೇವಿುಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ನೇವಿುಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಆದದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನಿಗೆ ಮೆಚ್ಚುವವರಾಗಿರಬೇಕೆಂಬದೇ ನಮ್ಮ ಗುರಿಯಾಗಿದೆ.


ಜಾಣನಾದ ಸೇವಕನಿಗೆ ರಾಜನ ಕೃಪೆ; ಮಾನಗೇಡಿಗೆ ರಾಜನ ರೌದ್ರ.


ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು; ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದಿರನು.


ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು