ಮತ್ತಾಯ 25:22 - ಕನ್ನಡ ಸತ್ಯವೇದವು J.V. (BSI)22 ಆಗ ಎರಡು ತಲಾಂತು ಹೊಂದಿದವನು ಮುಂದೆಬಂದು - ಸ್ವಾಮೀ, ಎರಡು ತಲಾಂತು ನನಗೆ ಒಪ್ಪಿಸಿದಿಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಎರಡು ತಲೆಂತು ಪಡೆದಿದ್ದವನೂ ಮುಂದೆ ಬಂದು, ‘ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ,’ ಎಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಎರಡು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಸಹ ಬಂದು, ‘ಒಡೆಯನೇ, ನೀನು ನನಗೆ ಎರಡು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಇನ್ನೂ ಎರಡು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ದೊನ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ದಿಲ್ಲೊ ಫಿಡೆ ಯೆಲೊ. ಅನಿ, ಮಾಲಿಕ್, ತುಮಿ ಮಾಕಾ ದೊನ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ದಿಲ್ಲ್ಯಾಶಿ. ಅಬಗಾ, ಮಿಯಾ ಅನಿ ದೊನ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಕಮ್ವುಲಾ. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |