Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:29 - ಕನ್ನಡ ಸತ್ಯವೇದವು J.V. (BSI)

29 ಇದ್ದವರಿಗೆಲ್ಲಾ ಕೊಡಲ್ಪಡುವದು, ಅವರಿಗೆ ಮತ್ತೂ ಹೆಚ್ಚಾಗುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ತನ್ನಲ್ಲಿರುವುದನ್ನು ವಿನಿಯೋಗಿಸುವ ಪ್ರತಿಯೊಬ್ಬನಿಗೂ ಹೆಚ್ಚಾಗಿ ಕೊಡಲ್ಪಡುವುದು, ಆದರೆ ತನ್ನಲ್ಲಿರುವುದನ್ನು ವಿನಿಯೋಗಿಸದಿರುವ ವ್ಯಕ್ತಿಯಿಂದ ಇದ್ದದ್ದನ್ನೂ ಕಸಿದುಕೊಳ್ಳಲಾಗುವುದು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕೊನಾಕ್ಡೆ ಉಲ್ಲೆಸೆ ಹಾಯ್ ತೆಂಕಾ ಅನಿ ಜಾಸ್ತಿಚೆ ದಿವ್ನ್ ಹೊತಾ ಅನಿ ತೆಚೆಕ್ಡೆ ಭರ್‍ಪುರ್ ರ್‍ಹಾತಾ. ಖರೆ ಜೆ ಕೊನಾಕ್ಡೆ ಕಾಯ್ಬಿ ನಾ. ತೆಂಚ್ಯಾಕ್ಡೆ ಹೊತ್ತೆ ಉಲ್ಲೆಸೆಬಿ ಕಾಡುನ್ ಘೆವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:29
16 ತಿಳಿವುಗಳ ಹೋಲಿಕೆ  

ಯಾಕಂದರೆ ಇದ್ದವನಿಗೆ ಕೊಡಲ್ಪಡುವದು, ಅವನಿಗೆ ಮತ್ತೂ ಹೆಚ್ಚಾಗುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.


ಆದದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವದು ಅಂದನು.


ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ಹೇಳಿದನು.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.


ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.


ಆದದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ದೇವರ ಕಡೆಗೆ ತಿರುಗಿಕೋ. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ದೇವರ ಕಡಗೆ ತಿರುಗಿಕೊಳ್ಳದೆ ಹೋದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು.


ಅವರು ಆತನಿಗೆ - ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ಕಾಲಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ಒಕ್ಕಲಿಗರಿಗೆ ತನ್ನ ತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.


ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಯಾಜಕನನ್ನೂ ಧಿಕ್ಕರಿಸಿದ್ದಾನೆ.


ಆದಕಾರಣ ನಾನು ನನ್ನ ಧಾನ್ಯದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವದಕ್ಕೆ ನಾನು ಕೊಟ್ಟ ಉಣ್ಣೆನಾರುಗಳನ್ನು ಕಿತ್ತುಬಿಡುವೆನು.


ತನ್ನ ಸೇವಕರಿಗೆ - ಅವನಿಂದ ಆ ತಲಾಂತು ತೆಗೆದು ಹತ್ತು ತಲಾಂತು ಇದ್ದವನಿಗೆ ಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು