Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:35 - ಕನ್ನಡ ಸತ್ಯವೇದವು J.V. (BSI)

35 ನಾನು ಹಸಿದಿದ್ದೆನು, ನನಗೆ ಊಟಕ್ಕೆ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನ್ನನ್ನು ಸೇರಿಸಿಕೊಂಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಮಿಯಾ ಭುಕೆನ್ ಹೊತ್ತೊ ತುಮಿ ಮಾಕಾ ಜೆವಾನ್ ದಿಲ್ಯಾಶಿ. ಮಿಯಾ ಸೊಸೆನ್ ಹೊತ್ತೊ ಮಾಕಾ ತುಮಿ ಪಿವ್ಕ್ ದಿಲ್ಯಾಶಿ, ಮಿಯಾ ಪರ್‌ದೆಶಿ ಹೊಲ್ಲೊ ತುಮಿ ಮಾಕಾ ತುಮ್ಚ್ಯಾ ಘರಾತ್ನಿ ಅಸ್ರೊ ದಿಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:35
52 ತಿಳಿವುಗಳ ಹೋಲಿಕೆ  

ಯಾರನ್ನೂ ಹಿಂಸಿಸದೆ ಒತ್ತೆಯನ್ನು ಕೇಳದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ಮುಟ್ಟಿನ ಹೆಂಗಸನ್ನು ಸೇರದೆ ಯಾರನ್ನೂ ಹಿಂಸಿಸದೆ ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.


ಪರಸ್ಥಳದವನು ಬೈಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೇಬಾಗಲುಗಳನ್ನು ತೆರೆದಿದ್ದೆನಷ್ಟೆ.


ಹಾಗಾದರೆ ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹ ಉಂಟಾದದರಿಂದ ನಿನ್ನ ಪ್ರೀತಿಯ ನಿವಿುತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು.


ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರು ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮ ತಮ್ಮ ಶಕ್ತ್ಯನುಸಾರ ದ್ರವ್ಯ ಸಹಾಯಮಾಡಬೇಕೆಂದು ನಿಶ್ಚಯಿಸಿಕೊಂಡರು.


ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಿಬಂತು, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


ನಂಬಿದ್ದ ಮಂಡಲಿಯವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಇದಲ್ಲದೆ ಒಬ್ಬನಾದರೂ ತನಗಿದ್ದ ಆಸ್ತಿಯಲ್ಲಿ ಯಾವದೊಂದನ್ನೂ ಸ್ವಂತವಾದದ್ದೆಂದು ಹೇಳಲಿಲ್ಲ. ಎಲ್ಲವೂ ಅವರಿಗೆ ಹುದುವಾಗಿ ಇತ್ತು.


ಅವರಲ್ಲಿ ಕೆಲವರು - ಯೂದನ ವಶದಲ್ಲಿ ಹಣದ ಚೀಲವಿದ್ದದರಿಂದ ಹಬ್ಬಕ್ಕಾಗಿ ನಮಗೆ ಬೇಕಾದದ್ದನ್ನು ಕೊಂಡುಕೋ ಎಂಬದಾಗಿಯೋ ಬಡವರಿಗೆ ಏನಾದರೂ ಕೊಡು ಎಂಬದಾಗಿಯೋ ಯೇಸು ಅವನಿಗೆ ಹೇಳುತ್ತಾನೆ ಎಂದು ನೆನಸಿದರು.


ಹೇಗೂ ಒಳಗಿರುವಂಥದನ್ನು ದಾನಾಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವದು.


ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸು ಬಂದಾಗ ಅವರಿಗೆ ಉಪಕಾರಮಾಡಬಹುದು; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.


ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ, ಆದರೆ ನಾನು ನಿಮ್ಮಲ್ಲಿ ಯಾವಾಗಲೂ ಇರುವದಿಲ್ಲ.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು;


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು; ತನ್ನ ಅನ್ನವನ್ನು ಬಡವರಿಗೆ ಕೊಡುತ್ತಾನಲ್ಲವೆ.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ನೆರೆಯವನನ್ನು ತಿರಸ್ಕರಿಸುವವನು ದೋಷಿ; ದರಿದ್ರನನ್ನು ಕನಿಕರಿಸುವವನು ಧನ್ಯನು.


ಆಕೆಯು ಹೋಗುತ್ತಿರುವಾಗ ತಿರಿಗಿ ಆಕೆಯನ್ನು ಕರೆದು - ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು