Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:44 - ಕನ್ನಡ ಸತ್ಯವೇದವು J.V. (BSI)

44 ಅದಕ್ಕೆ ಅವರು ಸಹ - ಸ್ವಾಮೀ, ಯಾವಾಗ ನೀನು ಹಸಿದದ್ದನ್ನೂ ನೀನು ಬಾಯಾರಿದ್ದನ್ನೂ ನೀನು ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ರೋಗದಲ್ಲಿ ಬಿದ್ದದ್ದನ್ನೂ ಸೆರೆಮನೆಯಲ್ಲಿದ್ದದ್ದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು? ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತನ್ನಾ ತೆನಿ, ಧನಿಯಾ, ಕನ್ನಾ ಅಮಿ ತುಕಾ ಭುಕೆನ್ ಹೊತ್ತೊ ನಾಹೊಲ್ಯಾರ್ ಸೊಸೆನ್ ಹೊತ್ತೊ. ಪರ್‌ದೆಶಿ ಹೊತ್ತೊ ನಾಹೊಲ್ಯಾರ್ ನಾಗ್ಡೊ ಹೊತ್ತೊ. ಶಿಕ್ ಹೊತ್ತೊ ನಾಹೊಲ್ಯಾರ್ ಬಂದಿಖಾನ್ಯಾತ್ ಹೊತ್ತೊ ಬಗಟ್ಲಾವ್. ಅನಿ ತುಕಾ ಮಜತ್ ಕರಿನಸ್ತಾನಾ ರ್‍ಹಾಲಾವ್? ಮನುನ್ ಜಬಾಬ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:44
14 ತಿಳಿವುಗಳ ಹೋಲಿಕೆ  

ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು ಎಂದು ಯೇಸುವನ್ನು ಕೇಳಲು


ಸ್ವಾಮೀ, ಸ್ವಾಮೀ, ನಿನ್ನ ಹೆಸರಿನ ಮೇಲೆ ನಾವು ಬೋಧನೆ ಹೇಳಲಿಲ್ಲವೇ? ನಿನ್ನ ಹೆಸರಿನ ಮೇಲೆ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನ ಮೇಲೆ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಆ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.


ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹು ಕಠಿನ ಎಂದು ಯೆಹೋವನು ಅನ್ನುತ್ತಾನೆ. ನಿನಗೆ ವಿರುದ್ಧವಾಗಿ ಏನು ಮಾತಾಡಿದ್ದೇವೆ ಅನ್ನುತ್ತೀರಾ?


ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ; ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು, ಅವರೇ ಆತನಿಗೆ ಇಷ್ಟ, ನ್ಯಾಯತೀರಿಸುವ ದೇವರು ಎಲ್ಲಿಯೋ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ನೀನಾದರೆ - ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ತೊಲಗಿ ಹೋಗಿದೆ ನಿಶ್ಚಯ ಎಂದುಕೊಂಡಿದ್ದೀ; ನಾನು ಪಾಪಮಾಡಲಿಲ್ಲವೆಂದು ನೀನು ಹೇಳಿದ ಕಾರಣ, ಇಗೋ ನಾನು ನಿನಗೆ ನ್ಯಾಯತೀರಿಸುವೆನು.


ನನಗೆ ಮುಡಚಟ್ಟಾಗಲಿಲ್ಲ, ಅನ್ಯದೇವತೆಗಳನ್ನು ನಾನು ಹಿಂಬಾಲಿಸಲಿಲ್ಲವೆಂದು ಹೇಗೆ ಹೇಳುತ್ತೀ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ಕೆಲಸವನ್ನು ಮನಸ್ಸಿಗೆ ತಂದುಕೋ, ತನ್ನ ಜಾಡೆಗಳನ್ನು ತಾರುಮಾರು ಮಾಡುವ ವೇಗವಾದ ಹೆಣ್ಣು ಒಂಟೆಯಂತಿದ್ದೀ.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.


ಪ್ರವಾದಿಯನ್ನು ಪ್ರವಾದಿಯೆಂದು ಸೇರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸೇರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.


ಪರದೇಶಿಯಾಗಿದ್ದೆನು, ನೀವು ನನ್ನನ್ನು ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವದಕ್ಕೆ ಕೊಡಲಿಲ್ಲ; ರೋಗದಲ್ಲಿ ಬಿದ್ದಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವದಕ್ಕೆ ಬರಲಿಲ್ಲವೆಂದು ಹೇಳುವನು.


ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು