Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:5 - ಕನ್ನಡ ಸತ್ಯವೇದವು J.V. (BSI)

5 ಮದಲಿಂಗನು ಬರುವದಕ್ಕೆ ತಡಮಾಡಲು ಅವರೆಲ್ಲರು ತೂಕಡಿಸಿ ಮಲಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮದುಮಗನ ಆಗಮನ ತಡವಾಯಿತು. ಅವರೆಲ್ಲರೂ ಆಯಾಸದಿಂದ ತೂಕಡಿಸುತ್ತಾ ನಿದ್ರೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮದುಮಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸುತ್ತಾ ನಿದ್ರೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ನ್ಹವ್ರೊ ಯೆವ್ಕ್ ಎಳ್ ಹೊಲ್ಲ್ಯಾಕ್ ತೆನಿ ಸಗ್ಳೆ ಜಾನಾ ಝೆಮುನ್ಗೆತ್-ಝೆಮುನ್ಗೆತ್ ನಿಜುನ್ ಪಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:5
23 ತಿಳಿವುಗಳ ಹೋಲಿಕೆ  

ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.


ಆದರೆ ಆ ಕೆಟ್ಟ ಆಳು - ನನ್ನ ಯಜಮಾನನು ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು


ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ


ಬಹುಕಾಲದ ಮೇಲೆ ಆ ಆಳುಗಳ ಧಣಿಯು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ವಿಮೋಚನೆಯು ಹತ್ತಿರವಾಯಿತು.


ಹೀಗಿದ್ದರೂ ಮನುಷ್ಯಕುಮಾರನು ಬಂದಾಗ ಭೂವಿುಯ ಮೇಲೆ ನಂಬಿಕೆಯನ್ನು ಕಾಣುವನೋ? ಅಂದನು.


ಆತನು ತಿರಿಗಿ ಬಂದಾಗ ಅವರು ನಿದ್ದೆಮಾಡುವದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.


ಆಮೇಲೆ ಆ ಶಿಷ್ಯರ ಬಳಿಗೆ ಬಂದು ಅವರು ನಿದ್ದೆ ಮಾಡುವದನ್ನು ಕಂಡು ಪೇತ್ರನಿಗೆ - ಹೀಗೋ? ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು; ಇಗೋ, ಎನ್ನಿನಿಯನು ಕದ ತಟ್ಟಿ ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ ಅಂದನು.


ರಾತ್ರಿ ರಾತ್ರಿಯಲ್ಲಿಯೂ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು; ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.


ನಿಮಗಿರುವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವದಿಲ್ಲವೆಂಬದೇ.


ಬುದ್ಧಿವಂತೆಯರು ತಮ್ಮ ಆರತಿಗಳ ಕೂಡ ಪಾತ್ರೆಗಳಲ್ಲಿ ಎಣ್ಣೆ ತಕ್ಕೊಂಡರು.


ಆದರೆ ಅರ್ಧರಾತ್ರಿಯಲ್ಲಿ - ಇಗೋ, ಮದಲಿಂಗನು! ಅವನನ್ನು ಎದುರುಗೊಳ್ಳುವದಕ್ಕೆ ಹೊರಡಿರಿ ಎಂಬ ಕೂಗಾಯಿತು.


ಇಷ್ಟರೊಳಗೆ ಜನರು ಜಕರೀಯನನ್ನು ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.


ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ? [ಎಂದು ನಾನು ಅಂದುಕೊಂಡಾಗ]


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು