Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:8 - ಕನ್ನಡ ಸತ್ಯವೇದವು J.V. (BSI)

8 ಆಗ್ಗೆ ಬುದ್ಧಿಯಿಲ್ಲದವರು ಬುದ್ಧಿವಂತೆಯರಿಗೆ - ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬುದ್ಧಿಹೀನ ಕನ್ನಿಕೆಯರು ಬುದ್ಧಿವಂತ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿ. ನಮ್ಮ ದೀಪಾರತಿಗಳಲ್ಲಿದ್ದ ಎಣ್ಣೆಯೆಲ್ಲಾ ಮುಗಿಯಿತು’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬುದ್ಧಿಹೀನರು ಬುದ್ಧಿವಂತೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿರಿ, ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಬುದ್ದ್ ನಸಲ್ಲ್ಯಾ ಧೆಡ್ನಿಯಾನಿ ಬುದ್ದ್ ಅಸಲ್ಲ್ಯಾ ಧೆಡ್ನಿಯಾಕ್ನಿ ಜಾವ್ನ್, ತುಮ್ಚ್ಯಾಕ್ಡೆ ಹೊತ್ತ್ಯಾ ತೆಲಾತ್ಲೆ ಉಲ್ಲೆ ತೆಲ್ ಅಮ್ಕಾಬಿ ದಿವಾ, ಅಮ್ಚ್ಯಾ ಆರ್‍ತಿಯಾ ಇಜುನ್ ಜಾವ್ಲ್ಯಾತ್. ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:8
18 ತಿಳಿವುಗಳ ಹೋಲಿಕೆ  

ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀವಟಿಗೆಗಳು ಉರಿಯುತ್ತಾ ಇರಲಿ.


ಶಿಷ್ಟರ ಬೆಳಕು ಬೆಳಗುವದು; ದುಷ್ಟರ ದೀಪವು ಆರುವದು.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.


ಆದದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವದು ಅಂದನು.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವದು.


ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಲ?


ಹೇಗಾದರೂ ದುಷ್ಟನ ದೀಪವು ಆರುವದು, ಅವನ ಒಲೆಯು ಉರಿಯುವದಿಲ್ಲ.


ಅದಕ್ಕೆ ಸೀಮೋನನು - ನೀವು ಹೇಳಿರುವ ಸಂಗತಿಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.


ಆದರೆ ಯಾವನಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದೆ ಶಾಶ್ವತವಾಗಿ ಬದುಕಿರುವದಕ್ಕಾಗಿ


ಆಗ ಪರಲೋಕರಾಜ್ಯವು ಆರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಎದುರುಗೊಳ್ಳುವದಕ್ಕೆ ಹೊರಟಂಥ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.


ಆಗ ಆ ಕನ್ಯೆಯರೆಲ್ಲರು ಎಚ್ಚತ್ತು ತಮ್ಮ ಆರತಿಗಳನ್ನು ನೆಟ್ಟಗೆಮಾಡಿದರು.


ನಮ್ಮ ಆರತಿಗಳು ಆರಿಹೋಗುತ್ತವೆ ಎಂದು ಹೇಳಿದರು. ಅದಕ್ಕೆ ಆ ಬುದ್ಧಿವಂತೆಯರು - ನಿಮಗೆ ಕೊಟ್ಟರೆ ನಮಗೂ ನಿಮಗೂ ಕೂಡ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೇದು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು