Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:13 - ಕನ್ನಡ ಸತ್ಯವೇದವು J.V. (BSI)

13 ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವದೋ ಅಲ್ಲಲ್ಲಿ ಈಕೆ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ ಹೇಳುವರೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜಗತ್ತಿನಾದ್ಯಂತ, ಎಲ್ಲೆಲ್ಲಿ ಶುಭಸಂದೇಶ ಪ್ರಕಟವಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು. ಇದು ನಿಶ್ಚಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರಪಂಚದಾದ್ಯಂತ ಎಲ್ಲೆಲ್ಲಿ ಸುವಾರ್ತೆಯನ್ನು ತಿಳಿಸಲಾಗುವುದೋ ಅಲ್ಲೆಲ್ಲಾ ಈ ಕಾರ್ಯವನ್ನು ಈಕೆಯ ನೆನಪಿಗಾಗಿ ತಿಳಿಸಲಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಖೈ ಹ್ಯಾ ಜಗಾತ್ ಬರಿ ಖಬರ್ ಸಾಂಗುನ್ ಹೊತಾ, ಥೈ ಥೈ ತೆನಿ ಕರಲ್ಲ್ಯಾ ಕಾಮಾಚ್ಯಾ ವಿಶಯಾತ್ ಸಾಂಗುನ್ ತಿಚಿ ಯಾದ್ ಕರುನ್ ಹೊತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:13
19 ತಿಳಿವುಗಳ ಹೋಲಿಕೆ  

ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವದೋ ಅಲ್ಲಲ್ಲಿ ಈಕೆ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ ಹೇಳುವರೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು.


ಅವನು ಎಂದೂ ಕದಲುವದಿಲ್ಲ; ನೀತಿವಂತನನ್ನು ಯಾವಾಗಲೂ ನೆನಸುವರು.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಯೆರೂಸಲೇವಿುನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಿಹೋಗುವದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ ಕುಲ ಪ್ರಜೆಗಳವರಿಗೂ ಸಕಲ ಭಾಷೆಗಳನ್ನಾಡುವವರಿಗೂ ಸಾರಿಹೇಳುವದಕ್ಕೆ ನಿತ್ಯವಾದ ಶುಭವರ್ತಮಾನವು ಅವನಲ್ಲಿತ್ತು.


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಬಿಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯು.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ನೀವು ದೇವರ ಕೃಪೆಯನ್ನು ಕುರಿತು ಸತ್ಯಾರ್ಥವನ್ನು ಕೇಳಿ ತಿಳುಕೊಂಡ ದಿವಸದಿಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟು ವೃದ್ಧಿಯಾಗುತ್ತಾ ಬಂದ ಪ್ರಕಾರ ಲೋಕದಲ್ಲೆಲ್ಲಾ ಹಬ್ಬಿ ಫಲಕೊಟ್ಟು ವೃದ್ಧಿಯಾಗುತ್ತಾ ಬರುತ್ತದೆ.


ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ - ಏನು ಸ್ವಾಮೀ ಎಂದು ಕೇಳಲು ದೂತನು ಅವನಿಗೆ - ನಿನ್ನ ಪ್ರಾರ್ಥನೆಗಳೂ ನಿನ್ನ ದಾನಧರ್ಮಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಏರಿ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು