Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:15 - ಕನ್ನಡ ಸತ್ಯವೇದವು J.V. (BSI)

15 ನಾನು ಅವನನ್ನು ನಿಮಗೆ ಹಿಡುಕೊಟ್ಟರೆ ನನಗೆ ಏನು ಕೊಡುತ್ತೀರಿ? ಅಂದನು. ಅವರು ಅವನಿಗೆ ಮೂವತ್ತು ರೂಪಾಯಿ ತೂಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಯೇಸುವನ್ನು ನಿಮಗೆ ಹಿಡಿದುಕೊಟ್ಟರೆ ನೀವು ನನಗೆ ಎಷ್ಟು ಹಣ ಕೊಡುವಿರಿ?” ಎಂದು ಕೇಳಿದನು. ಮಹಾಯಾಜಕರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಯೂದನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ, “ಮಿಯಾ ಜೆಜುಕ್ ಧರುನ್ ದಿಲ್ಯಾರ್ ತುಮಿ ಮಾಕಾ ಕಾಯ್ ದಿತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ತಿಸ್ ಚಾಂದಿಚೆ ಪೈಸೆ ಮೆಜುನ್ ತೆಕಾ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:15
17 ತಿಳಿವುಗಳ ಹೋಲಿಕೆ  

ತಿವಿಸಿಕೊಂಡು ಸತ್ತವನು ದಾಸನು ಅಥವಾ ದಾಸಿಯು ಆಗಿದ್ದ ಪಕ್ಷಕ್ಕೆ ಅವರ ಯಜಮಾನನಿಗೆ ಮೂವತ್ತು ರೂಪಾಯಿ ಈಡುಕೊಡಿಸಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಅವನು ಕುಡಿದು ಜಗಳವಾಡುವವನೂ ಹೊಡೆದಾಡುವವನೂ ಆಗಿರಬಾರದು; ಸಾತ್ವಿಕನೂ ಕುತರ್ಕ ಮಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


(ಈ ಮನುಷ್ಯನು ತನ್ನ ದ್ರೋಹದಿಂದ ಸಂಪಾದಿಸಿದ ಹಣಕ್ಕೆ ಒಂದು ಹೊಲವನ್ನು ಕೊಂಡುಕೊಂಡನು; ಮತ್ತು ತಲೆಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಸುರಿದವು.


ಮೀಕನು ಅವನಿಗೆ - ನೀನು ನಮ್ಮಲ್ಲಿರು; ನಮಗೆ ತಂದೆಯೂ ಯಾಜಕನೂ ಆಗು. ನಿನಗೆ ವರುಷಕ್ಕೆ ಹತ್ತು ರೂಪಾಯಿಗಳನ್ನೂ ಒಂದು ದುಸ್ತು ಬಟ್ಟೆಯನ್ನೂ ಆಹಾರವನ್ನೂ ಕೊಡುತ್ತೇನೆ ಅನ್ನಲು


ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ - ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವದೆಂಬದನ್ನೂ ನಾವು ಅವನನ್ನು ಗೆದ್ದು ಕಟ್ಟಿ ಕುಂದಿಸುವದು ಹೇಗೆಂಬದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು ಎಂದು ಹೇಳಿದರು.


ನಾನು ನಿನ್ನ ಸಂಗಮ ಮಾಡುವದಕ್ಕೆ ಒಪ್ಪುತ್ತೀಯಾ ಅನ್ನಲು ಆಕೆ - ನನ್ನಲ್ಲಿ ಬರಬೇಕಾದರೆ ನೀನು ಏನು ಕೊಡುತ್ತೀ ಎಂದು ಕೇಳಿದಳು.


ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಇವುಗಳೇ.


ಅಂದಿನಿಂದ ಅವನು ಆತನನ್ನು ಹಿಡುಕೊಡುವದಕ್ಕೆ ಅನುಕೂಲವಾದ ಸಮಯವನ್ನು ನೋಡುತ್ತಿದ್ದನು.


ಸ್ತ್ರೀಗೋಸ್ಕರ ಮೂವತ್ತು ರೂಪಾಯಿಗಳನ್ನೂ ಕೊಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು