Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:18 - ಕನ್ನಡ ಸತ್ಯವೇದವು J.V. (BSI)

18 ಆತನು - ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ ಅವನಿಗೆ - ನನ್ನ ಕಾಲ ಸಮೀಪವಾಯಿತು, ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬಮಾಡುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಹೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಅವರು, “ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ. ‘ನನ್ನ ಕಾಲ ಸಮೀಪಿಸಿತು. ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ’; ಇದನ್ನು ನಮ್ಮ ಗುರುವೇ ಹೇಳಿಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದಕ್ಕೆ ಯೇಸು, “ನೀವು ನಗರಕ್ಕೆ ಹೋಗಿ ನಾನು ಸೂಚಿಸುವ ವ್ಯಕ್ತಿಯನ್ನು ಭೇಟಿಮಾಡಿ ಅವನಿಗೆ, ‘ಆರಿಸಿಕೊಂಡ ಸಮಯ ಸಮೀಪಿಸಿತು. ನಾನು ಪಸ್ಕಹಬ್ಬದ ಊಟವನ್ನು ನಿನ್ನ ಮನೆಯಲ್ಲಿ ನನ್ನ ಶಿಷ್ಯರೊಂದಿಗೆ ಮಾಡುತ್ತೇನೆ ಎಂದು ಉಪದೇಶಕನು ಹೇಳುತ್ತಾನೆ’ ಎಂಬುದಾಗಿ ತಿಳಿಸಿರಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಯೇಸು, “ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ, ‘ನನ್ನ ಸಮಯವು ಸಮೀಪವಾಗಿದೆ. ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕರು ಕೇಳುತ್ತಾರೆ’ ಎಂಬುದಾಗಿ ಅವನಿಗೆ ಹೇಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತನ್ನಾ ಜೆಜುನ್ ತೆಂಕಾ,“ಶಾರಾತ್ಲ್ಯಾ ಅಮುಕ್‌ ಹ್ಯಾ ಮಾನ್ಸಾಕ್ಡೆ ಜಾವಾ, ಅನಿ,‘ಗುರುಜಿ, ಮಾಜೊ ಎಳ್ ಜಗ್ಗೊಳ್ ಯೆಲಾ; ಮಿಯಾ ಮಾಜ್ಯಾ ಶಿಸಾಂಚ್ಯಾ ವಾಂಗ್ಡಾ ತುಜ್ಯಾ ಘರಾತ್ ಪಾಸ್ಕಾಚ್ಯಾ ಸನಾಚೆ ಜೆವಾನ್ ಕರ್‍ತಾ,’ ಮನುಲಾ ಮನುನ್ ಸಾಂಗಾ.” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:18
18 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ನನ್ನ ಸಮಯವು ಇನ್ನೂ ಬಂದಿಲ್ಲ; ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.


ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.


ನೀವೇ ಜಾತ್ರೆಗೆ ಹೋಗಿರಿ; ನನ್ನ ಸಮಯವು ಇನ್ನೂ ಒದಗದೆ ಇರುವದರಿಂದ ನಾನು ಈ ಜಾತ್ರೆಗೆ ಈಗ ಹೋಗುವದಿಲ್ಲವೆಂದು ಹೇಳಿದನು.


ಆಗ ಯೇಸು ಅವರಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ - ಮನುಷ್ಯಕುಮಾರನು ತನ್ನ ಮಹಿಮೆಯ ಪದವಿಯನ್ನು ಹೊಂದುವ ಸಮಯ ಬಂದದೆ.


ನಾನು ದಿನಾಲು ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನ ಎಂದು ಹೇಳಿದನು.


ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು - ಗುರುವು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.


ಆತನು ಇನ್ನೂ ಮಾತಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು - ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವದು? ಅಂದರು.


ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.


ಮತ್ತು ಗುರುಗಳು ಅನ್ನಿಸಿಕೊಳ್ಳಬೇಡಿರಿ; ಕ್ರಿಸ್ತನೊಬ್ಬನೇ ನಿಮಗೆ ಗುರುವು.


ಆದರೆ ನೀವು ಬೋಧಕರನ್ನಿಸಿಕೊಳ್ಳಬೇಡಿರಿ; ಒಬ್ಬನೇ ನಿಮ್ಮ ಬೋಧಕನು, ನೀವೆಲ್ಲರು ಸಹೋದರರು.


ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ಇವು ಸ್ವಾವಿುಯವರಿಗೆ ಬೇಕಾಗಿವೆ ಅನ್ನಿರಿ; ಕೂಡಲೆ ಅವುಗಳನ್ನು ಬಿಟ್ಟುಕೊಡುವನು ಎಂದು ಹೇಳಿ ಕಳುಹಿಸಿದನು.


ಯೇಸು ಆಕೆಗೆ - ಮರಿಯಳೇ, ಎಂದು ಹೇಳಿದನು. ಆಕೆ ತಿರುಗಿಕೊಂಡು ಇಬ್ರಿಯ ಮಾತಿನಲ್ಲಿ - ರಬ್ಬೂನಿ, ಅಂದಳು. (ರಬ್ಬೂನಿ ಅಂದರೆ ಗುರುವೇ ಎಂದು ಅರ್ಥ).


ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ, ನಮಸ್ಕಾರ ಎಂದು ಹೇಳಿ ಆತನಿಗೆ ಮುದ್ದಿಟ್ಟನು.


ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆ ಮಾಡಿ ಪಸ್ಕಕ್ಕೆ ಸೌರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು