Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:26 - ಕನ್ನಡ ಸತ್ಯವೇದವು J.V. (BSI)

26 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಶಿಷ್ಯರಿಗೆ ಕೊಟ್ಟು - ತಕ್ಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವರೆಲ್ಲರೂ ಊಟಮಾಡುತ್ತಿರುವಾಗ ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೈವಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ತೆಗೆದುಕೊಂಡು ಭುಜಿಸಿರಿ, ಇದು ನನ್ನ ಶರೀರ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರು ಊಟಮಾಡುತ್ತಿದ್ದಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಎಂದು ಹೇಳಿ ತನ್ನ ಶಿಷ್ಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು ತಮ್ಮ ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತೆನಿ ಜೆವಾನ್ ಕರ್‍ತಾನಾ ಜೆಜುನ್ ಎಕ್ ಭಾಕ್ರಿ ಘೆವ್ನ್ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ ಮೊಡುನ್ ಅಪ್ನಾಚ್ಯಾ ಶಿಸಾಕ್ನಿ ದಿವ್ನ್. “ಹೆ ಘೆವಾ ಅನಿ ಖಾವಾ. ಹೆ ಮಾಜೆ ಆಂಗ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:26
16 ತಿಳಿವುಗಳ ಹೋಲಿಕೆ  

ವಾರದ ಮೊದಲನೆಯ ದಿವಸದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಕೂಡಿಬಂದಾಗ ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಸರಿಹೊತ್ತಿನವರೆಗೂ ಉಪನ್ಯಾಸವನ್ನು ನಡಿಸಿದನು.


ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ.


ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;


ಆತನು ಅವರ ಸಂಗಡ ಊಟಕ್ಕೆ ಕೂತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಅವರಿಗೆ ಕೊಡುತ್ತಿರಲಾಗಿ ಅವರ ಕಣ್ಣುಗಳು ತೆರೆದವು.


ಆಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು - ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟು ಆ ಎರಡು ಮೀನುಗಳನ್ನೂ ಎಲ್ಲರಿಗೆ ಹಂಚಿಸಿದನು.


ಮತ್ತು ಜನರಿಗೆ ಹುಲ್ಲಿನ ಮೇಲೆ ಕೂತುಕೊಳ್ಳುವದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತಕ್ಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರ ಕೈಗೆ ಕೊಟ್ಟನು; ಶಿಷ್ಯರು ಜನರ ಗುಂಪಿಗೆ ಕೊಟ್ಟರು.


ಆಮೇಲೆ ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟು - ಇದರಲ್ಲಿರುವದನ್ನು ಎಲ್ಲರೂ ಕುಡಿಯಿರಿ;


ಆಮೇಲೆ ಆತನು [ದ್ರಾಕ್ಷಾರಸದ] ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ - ಇದನ್ನು ತಕ್ಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು