Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:35 - ಕನ್ನಡ ಸತ್ಯವೇದವು J.V. (BSI)

35 ಪೇತ್ರನು ಆತನಿಗೆ - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲ ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ಸರಿಯೆ, ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ನುಡಿದನು. ಅದರಂತೆಯೇ ಉಳಿದ ಶಿಷ್ಯರೂ ದನಿಗೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದರೆ ಪೇತ್ರನು, “ನಾನು ನಿನ್ನೊಂದಿಗೆ ಸತ್ತರೂ ಸರಿ, ನಿನ್ನನ್ನು ನಿರಾಕರಿಸುವುದಿಲ್ಲ” ಅಂದನು. ಉಳಿದ ಶಿಷ್ಯರು ಸಹ ಅದೇ ರೀತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅದಕ್ಕೆ ಪೇತ್ರನು ಯೇಸುವಿಗೆ, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದನು. ಅದರಂತೆಯೇ ಉಳಿದ ಶಿಷ್ಯರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ಪೆದ್ರುನ್, “ಮಾಕಾ ತುಜ್ಯಾ ವಾಂಗ್ಡಾ ಮರ್‍ತಲಿ ಪರಿಸ್ತಿತಿ ಯೆಲ್ಯಾರ್‍ಬಿ, ಅಶೆ ಕನ್ನಾಚ್ ಮನಿ ನಾ!” ಮನುನ್ ಜಬಾಬ್ ದಿಲ್ಯಾನ್. ಅನಿ ಹುರಲ್ಲ್ಯಾ ಶಿಸಾನಿಬಿ ಅಸೆಚ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:35
10 ತಿಳಿವುಗಳ ಹೋಲಿಕೆ  

ನೀನು ಹೇಳುವದು ನಿಜ; ಅವರು ನಂಬದೆಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ.


ಪೇತ್ರನು ಆತನಿಗೆ - ಸ್ವಾಮೀ, ನಾನು ಯಾಕೆ ಈಗ ನಿನ್ನ ಹಿಂದೆ ಬರಲಾರೆನು? ನಿನಗಾಗಿ ನನ್ನ ಪ್ರಾಣವನ್ನಾದರೂ ಕೊಟ್ಟೇನು ಎಂದು ಹೇಳಲು


ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವದು; ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಭಯದಿಂದ ನಡೆದುಕೊಳ್ಳುವವನು ಧನ್ಯನು; ಕಠಿನಹೃದಯನು ಕೇಡಿಗೆ ಸಿಕ್ಕಿಬೀಳುವನು.


ಜನರೆಲ್ಲರೂ - ಯೆಹೋವನು ಹೇಳಿದಂತೆಯೇ ಮಾಡುವೆವು ಎಂದು ಒಗ್ಗಟ್ಟಾಗಿ ಪ್ರತ್ಯುತ್ತರ ಕೊಡಲಾಗಿ ಮೋಶೆ ಯೆಹೋವನ ಬಳಿಗೆ ಹೋಗಿ ಅವರ ಮಾತುಗಳನ್ನು ಆತನಿಗೆ ಅರಿಕೆ ಮಾಡಿದನು.


ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು