Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:39 - ಕನ್ನಡ ಸತ್ಯವೇದವು J.V. (BSI)

39 ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತೊ ಉಲ್ಲೆ ಫಿಡೆ ಗೆಲೊ ಅನಿ ಜಮ್ನಿ ವರ್‍ತಿ ಡಬ್ ಪಡುನ್, “ಮಾಜ್ಯಾ ಬಾಬಾ, ಹೊತಾ ಜಾಲ್ಯಾರ್, ಹೆ ಕಸ್ಟಾಚೆ ಆಯ್ದಾನ್ ಮಾಜ್ಯಾ ವೈನಾ ಕಾಡುನ್ ಘೆ! ಖರೆ ಮಾಜ್ಯಾ ಮನಾ ಸರ್ಕೆ ನ್ಹಯ್, ತುಜ್ಯಾ ಮನಾ ಸರ್ಕೆ ಹೊಂವ್ದಿತ್,” ಮನುನ್ ಮಾಗ್ನಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:39
27 ತಿಳಿವುಗಳ ಹೋಲಿಕೆ  

ನನ್ನ ಚಿತ್ತದಂತೆ ನಡೆಯುವದಕ್ಕಾಗಿ ನಾನು ಬಂದಿಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದಾತನ ಚಿತ್ತವು ಏನಂದರೆ ಆತನು


ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.


ತಿರಿಗಿ ಎರಡನೆಯ ಸಾರಿ ಹೋಗಿ - ನನ್ನ ತಂದೆಯೇ, ನಾನು ಕುಡಿದ ಹೊರತು ಈ ಪಾತ್ರೆ ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಎಂದು ಪ್ರಾರ್ಥನೆಮಾಡಿದನು.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ತಂದೆ ಹೇಳಿದ್ದನ್ನು ಕೇಳಿ ನ್ಯಾಯತೀರಿಸುತ್ತೇನೆ; ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ಅಪೇಕ್ಷಿಸುವದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂಬದು ಲೋಕಕ್ಕೆ ತಿಳಿದಿರಬೇಕೆಂದು ತಂದೆಯು ನನಗೆ ಕೊಟ್ಟ ಆಜ್ಞೆಯ ಮೇರೆಗೆ ಇದನ್ನು ಮಾಡುತ್ತೇನೆ. ಏಳಿರಿ, ಇಲ್ಲಿಂದ ಹೋಗೋಣ.


ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು.


ಆಗ ಕಲ್ಲನ್ನು ತೆಗೆದುಹಾಕಿದರು. ಮತ್ತು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ - ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಿನ್ನನ್ನು ಕೊಂಡಾಡುತ್ತೇನೆ;


ಅದಕ್ಕೆ ಯೇಸು - ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾತ್ರೆಯಲ್ಲಿ ನೀವು ಕುಡಿಯುವದು ನಿವ್ಮಿುಂದಾದೀತೇ ಎಂದು ಕೇಳಲು ಅವರು - ಆಗುವದು ಅಂದರು.


ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಬಿಲ್ಲು ಹೊಳೆಯುವಂತೆ ಆತನ ಸುತ್ತಣ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದು ಕಣ್ಣಿಗೆ ಬೀಳಲು ನಾನು ಅಡ್ಡಬಿದ್ದು ಮಾತಾಡುವಾತನ ವಾಣಿಯನ್ನು ಕೇಳಿದೆನು.


ಆತನು - ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ತೋರಿಸಿದರೆ ತನಗೆ ಸರಿಕಂಡಂತೆ ಮಾಡಲಿ, ಆತನ ಚಿತ್ತ ಅಂದನು.


ಆಗ ಮೋಶೆ ಆರೋನರು ಇಸ್ರಾಯೇಲ್ಯರ ಸರ್ವಸಮೂಹದವರ ಮುಂದೆ ಬೋರಲಬಿದ್ದರು.


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವದನ್ನೂ ಚಾಚಿದ ಕೈಯಲ್ಲಿ ಯೆರೂಸಲೇವಿುಗೆ ವಿರೋಧವಾಗಿ ಹಿರಿದ ಕತ್ತಿಯಿರುವದನ್ನೂ ಕಂಡಾಗ ಅವನೂ ಹಿರಿಯರೂ ಗೋಣೀತಟ್ಟನ್ನು ಹೊದ್ದುಕೊಂಡವರಾಗಿ ಬೋರ್ಲಬಿದ್ದರು;


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತಾಡಿ -


ಅವನು ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.


ಯೇಸುವಿನ ಪಾದಗಳಿಗೆ ಅಡ್ಡ ಬಿದ್ದು ಆತನಿಗೆ ಉಪಕಾರಸ್ತುತಿಮಾಡಿದನು. ಅವನು ಸಮಾರ್ಯದವನು.


ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಮೋಸಗೊಳಿಸುವದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ; ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ಅದಕ್ಕೆ ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡು ಮಗನು ಮಾಡುತ್ತಾನೆ ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು