Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:40 - ಕನ್ನಡ ಸತ್ಯವೇದವು J.V. (BSI)

40 ಆಮೇಲೆ ಆ ಶಿಷ್ಯರ ಬಳಿಗೆ ಬಂದು ಅವರು ನಿದ್ದೆ ಮಾಡುವದನ್ನು ಕಂಡು ಪೇತ್ರನಿಗೆ - ಹೀಗೋ? ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅನಂತರ ಆ ಮೂವರು ಶಿಷ್ಯರ ಬಳಿಗೆ ಬಂದು, ಅವರು ನಿದ್ರಿಸುತ್ತಿರುವುದನ್ನು ಕಂಡರು. ಪೇತ್ರನನ್ನು ಉದ್ದೇಶಿಸಿ, “ಏನಿದು, ಒಂದು ಗಂಟೆಯಾದರೂ ನನ್ನೊಡನೆ ಎಚ್ಚರವಾಗಿರಲು ನಿಮ್ಮಿಂದ ಆಗದೇ ಹೋಯಿತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದನು. ಅವರು ನಿದ್ರಿಸುತ್ತಿರುವುದನ್ನು ಕಂಡು ಆತನು ಪೇತ್ರನಿಗೆ, “ನೀವು ನನ್ನೊಂದಿಗೆ ಒಂದು ಗಂಟೆಯ ಕಾಲ ಎಚ್ಚರವಾಗಿರಲು ಸಾಧ್ಯವಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಏನು, ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಮಾನಾ ತೊ ಪರ್ತುನ್ ತಿಗ್ ಜಾನಾ ಶಿಸಾನಿಕ್ಡೆ ಯೆಲೊ. ತೆನಿ ನಿಜೆನ್ ಝೆಮುಲಾಗಲ್ಲೆ. ತನ್ನಾ ಜೆಜುನ್ ಪೆದ್ರುಕ್, “ತುಮ್ಕಾ ತಿಗ್ಯಾಕ್ನಿ ಮಾಜೆಸಾಟ್ನಿ ಎಕ್ ತಾಸ್‍ಬರ್ ಸೈತ್ ಜಾಗೆ ರ್‍ಹಾವ್ಕ್ ಹೊಯ್ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:40
12 ತಿಳಿವುಗಳ ಹೋಲಿಕೆ  

ಆಮೇಲೆ ಆತನು ಬಂದು ಅವರು ನಿದ್ದೆಮಾಡುವದನ್ನು ಕಂಡು ಪೇತ್ರನಿಗೆ - ಸೀಮೋನನೇ, ನಿದ್ದೆಮಾಡುತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?


ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು ದುಃಖಭಾರದಿಂದ ಇವರಿಗೆ ನಿದ್ರೆ ಹತ್ತಿರುವದನ್ನು ಕಂಡು


ಆತನು ತಿರಿಗಿ ಬಂದಾಗ ಅವರು ನಿದ್ದೆಮಾಡುವದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.


ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.


ಪೇತ್ರನು ಆತನಿಗೆ - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲ ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.


ಮತ್ತು ಅವರಿಗೆ - ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರ್ರಿ ಎಂದು ಹೇಳಿ


ಮದಲಿಂಗನು ಬರುವದಕ್ಕೆ ತಡಮಾಡಲು ಅವರೆಲ್ಲರು ತೂಕಡಿಸಿ ಮಲಗಿದರು.


ಇಸ್ರಾಯೇಲ್ಯರ ಅರಸನು ಬಂದ ದೂತರಿಗೆ - ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ ಅಂದನು.


ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು; ಅವನೂ ಅವನ ಜೊತೆಯಲ್ಲಿರುವವರೂ ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು ಎಂದು ಹೇಳಿಸಿದನು.


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು; ಇಗೋ, ಎನ್ನಿನಿಯನು ಕದ ತಟ್ಟಿ ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ ಅಂದನು.


ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು