Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:46 - ಕನ್ನಡ ಸತ್ಯವೇದವು J.V. (BSI)

46 ಏಳಿರಿ, ಹೋಗೋಣ; ನನ್ನನ್ನು ಹಿಡುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಎದ್ದೇಳಿ, ಹೋಗೋಣ. ನನಗೆ ದ್ರೋಹ ಬಗೆಯುವವನು ಹತ್ತಿರವೇ ಇದ್ದಾನೆ, ನೋಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನಾವು ಹೋಗಬೇಕು. ಎದ್ದೇಳಿ! ನನ್ನನ್ನು ವೈರಿಗಳಿಗೆ ಒಪ್ಪಿಸುವ ಮನುಷ್ಯನು ಇಲ್ಲಿಯೇ ಬರುತ್ತಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 “ಉಟಾ ಅಮಿ ಜಾಂವಾ. ಅಬಕಾ, ಮಾಕಾ ವಿಶ್ವಾಸ್‍ ಘಾತಾನ್ ಧರುನ್ ದಿತಲೊ ಮಾನುಸ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:46
11 ತಿಳಿವುಗಳ ಹೋಲಿಕೆ  

ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂಬದು ಲೋಕಕ್ಕೆ ತಿಳಿದಿರಬೇಕೆಂದು ತಂದೆಯು ನನಗೆ ಕೊಟ್ಟ ಆಜ್ಞೆಯ ಮೇರೆಗೆ ಇದನ್ನು ಮಾಡುತ್ತೇನೆ. ಏಳಿರಿ, ಇಲ್ಲಿಂದ ಹೋಗೋಣ.


ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು. ಅದು ನೆರವೇರುವ ತನಕ ನಾನು ಎಷ್ಟೋ ಬಿಕ್ಕಟ್ಟಿನಲ್ಲಿದ್ದೇನೆ.


ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು


ಕೂಡಲೆ ಆ ಫಿಲಿಷ್ಟಿಯನು ಹೊರಟು ದಾವೀದನೊಡನೆ ಯುದ್ಧಮಾಡುವದಕ್ಕೆ ಸಮೀಪಿಸಿದಾಗ ದಾವೀದನು ಫಿಲಿಷ್ಟಿಯ ಸೈನ್ಯದ ಕಡೆಗೆ ಓಡಿಹೋಗಿ ಆ ಫಿಲಿಷ್ಟಿಯನನ್ನು ಸಂಧಿಸಿ


ಆಗ ಆತನು ಅವರಿಗೆ - ನಾನು ಶ್ರಮೆ ಅನುಭವಿಸುವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.


ತರುವಾಯ ಶಿಷ್ಯರ ಬಳಿಗೆ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಇಗೋ, ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ.


ಆತನು ಇನ್ನೂ ಮಾತಾಡುತ್ತಿರಲು ಇಗೋ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು; ಮಹಾಯಾಜಕರು ಜನರ ಹಿರಿಯರು ಇವರ ಕಡೆಯಿಂದ ಬಹು ಜನರ ಗುಂಪು ಕತ್ತಿ ದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು.


ಆ ಗಳಿಗೆ ಬಂತು; ಇಗೋ, ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ. ಏಳಿರಿ, ಹೋಗೋಣ; ನನ್ನನ್ನು ಹಿಡುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ ಎಂದು ಹೇಳಿದನು.


ಆದರೂ ನೋಡಿರಿ, ನನ್ನನ್ನು ಹಿಡುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.


ಪೇತ್ರನು ತಿರುಗಿಕೊಂಡು ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವದನ್ನು ಕಂಡನು. ಆ ಶಿಷ್ಯನು ಊಟದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ - ಸ್ವಾಮೀ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು